ಮಿನಿ ಕುರುಕ್ಷೇತ್ರ: ಸುರ್ಜೇವಾಲ ಜೊತೆಗಿನ ಹೈವೋಲ್ಟೇಜ್​​​ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಮಿನಿ ಕುರುಕ್ಷೇತ್ರ: ಸುರ್ಜೇವಾಲ ಜೊತೆಗಿನ ಹೈವೋಲ್ಟೇಜ್​​​ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು


ಮಿನಿ ಕುರುಕ್ಷೇತ್ರ: ಸುರ್ಜೇವಾಲ ಜೊತೆಗಿನ ಹೈವೋಲ್ಟೇಜ್ ಸಭೆ ಬಳಿಕ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಬೆಂಗಳೂರು, ಮಾರ್ಚ್ 20: ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದ್ದು, ಅಖಾಡ ರಂಗೇರಿದೆ. ಟಿಕೆಟ್ ಘೋಷಣೆಗೂ ಮುನ್ನವೇ ಆಕಾಂಕ್ಷಿಗಳ ನಾಮಪತ್ರ ಸಲ್ಲಿಸಿದ್ದು ಕಾಂಗ್ರೆಸ್‌ಗೆ ತಲೆನೋವಾಗಿದೆ. ಬಿಕ್ಕಟ್ಟು ಬಗೆಹರಿಸಲು ರಾಜ್ಯ ಉಸ್ತುವಾರಿ ಸಚಿವ ರಣದೀಪ್ ಸಿಂಗ್ ಸುರ್ಜೇವಾಲ ಅಖಾಡಕ್ಕಿಳಿದಿದ್ದು, ಸಿಎಂ, ಡಿಸಿಎಂ ಜೊತೆ ಸಭೆ ನಡೆಸಿದ್ದಾರೆ. ಸದ್ಯ ಸಭೆ ಬಳಿಕ ಮಾಧ್ಯಮದವರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ನಾನು, ಸಿಎಂ, ರಾಜ್ಯ ಉಸ್ತುವಾರಿ ಸಭೆ ಮಾಡಿದ್ದೇವೆ. ಸಭೆಯಲ್ಲಿ ಎಲ್ಲ ಮುಖಂಡರ ಅಭಿಪ್ರಾಯ ಹೇಳಿದರು. ಒಮ್ಮತದ ನಿರ್ಧಾರ ಆಗಿದೆ. ನಮ್ಮ ಅಭಿಪ್ರಾಯವನ್ನು ಹೈಕಮಾಂಡ್‌ಗೆ ಕಳಿಸುತ್ತೇವೆ. SSಮಲ್ಲಿಕಾರ್ಜುನ್ ಜೊತೆಗೆ ಕೂಡ ಮಾತನಾಡಿದೆ. ಒಳ್ಳೇ ದಿನ ಅನ್ನೋ ಕಾರಣಕ್ಕೆ ನಾಮಪತ್ರ ಸಲ್ಲಿಸಿದ್ದಾನೆ. ಅಗತ್ಯಬಿದ್ರೆ ಹಿಂಪಡೆಯುತ್ತೇನೆ ಅಂತಾನೂ ಹೇಳಿದ್ದಾರೆ. ಅಲ್ಪಸಂಖ್ಯಾತರು ಪಕ್ಷ ಹೇಳಿದ್ದು ಅಂದಿದ್ದಾರೆ. ಒಗ್ಗಟ್ಟಿನಿಂದ ಕೆಲಸ ಅಂತ ಎಲ್ಲಾ ಹೇಳಿದ್ದಾರೆ. ಶೀಘ್ರವೇ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *