ಬೆಂಗಳೂರು, ಏ.15: ದಾವಣಗೆರೆ ದಂಗಲ್ ಮುಗಿಯುವಂತೆ ಕಾಣುತ್ತಿಲ್ಲ, ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಸಮಾಧನಕ್ಕೆ ಕಾರಣರಾದ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕೆ ಕಾಂಗ್ರೆಸ್ ಮೂವರು ಮುಸ್ಲಿಂ ನಾಯಕರಲ್ಲಿ ಇಬ್ಬರ ತಲೆದಂಡವಾಗಿದೆ. ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿದರು. ನಂತರ ನಸೀರ್ ಅಹ್ಮದ್ ಅವರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಸಚಿವ ಜಮೀರ್ ಗೂ ಮನೆಗೆ ಕರೆಸಿ ತರಾಟೆಗೆ ತೆಗೆದುಕೊಂಡಿದ್ದು ಸಿಎಂ. ಇದೀಗ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರಿಗೆ ಕೆಪಿಸಿಸಿ ಮತ್ತೊಂದು ಶಾಕ್ ನೀಡಿದೆ. ಇದೀಗ ಜಬ್ಬಾರ್ ಅವರನ್ನು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿರ್ವಹಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಣಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ನಾಯಕರೇ ಬಲ, ಮುಸ್ಲಿಮರಿಗೂ ಕಾಂಗ್ರೆಸ್ ಬೇಕು, ಅದರೂ ಇಂತಹ ಚಟುವಟಿಕೆ ನಡೆದಿರುವುದು ರಾಜಕೀಯ ಕ್ಷೇತ್ರದಲ್ಲಿ ದೊಡ್ಡ ಅಚ್ಚರಿಯನ್ನೇ ಮೂಡಿಸಿದೆ.
ಇನ್ನು ವಿಧಾನಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಆದೇಶವನ್ನು ಡಿ.ಕೆ. ಶಿವಕುಮಾರ್ ಅವರೇ ನೀಡಿದ್ದಾರೆ. ಅವರು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಬಂಡಾಯಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂಬುದಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಸಂದರ್ಭದಲ್ಲಿ ಜಬ್ಬಾರ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ದೂರು ಸಲ್ಲಿಸಲು ಭದ್ರವಾದ ದಾಖಲೆಗಳು ಲಭ್ಯವಿವೆ.
ಇದನ್ನೂ ಓದಿ: ಸಚಿವ ಜಮೀರ್ ಅಚ್ಚರಿಯ ನಡೆ: ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ ಜಮೀರ್, ಕುತೂಹಲ ಮೂಡಿಸಿದ ಚರ್ಚೆ!
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಯಾವುದೇ ಮುಲಾಜಿಲ್ಲದೆ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ವಜಾಗೊಳಿಸುವ ಮೂಲಕ ಡಿ.ಕೆ. ಶಿವಕುಮಾರ್ ಬಂಡಾಯ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ.ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರವಾಗಿ ಆರಂಭವಾದ ಅಸಮಾಧಾನ ಈಗ ನಸೀರ್ ಅಹ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅಂತಹ ಹಿರಿಯ ನಾಯಕರ ರಾಜಕೀಯ ಭವಿಷ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಿಕೆ ಶಿವಕುಮಾರ್ ಅವರ ಈ ನಡೆಯಿಂದ ಸಚಿವ ಜಮೀರ್ ಕೂಡ ನಡುಕ ಶುರುವಾಗಿದೆ. ಡಿಕೆ ಶಿವಕುಮಾರ್ ಜಮೀರ್ ವಿರುದ್ಧವೂ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 1:41 pm, ಬುಧವಾರ, 15 ಏಪ್ರಿಲ್ 26