Headlines

ಮತ್ತೆ ಮುನ್ನೆಲೆಗೆ ಸಿಎಂ ಬದಲಾವಣೆ ಚರ್ಚೆ: ಯತೀಂದ್ರ ಹೇಳಿಕೆ ಬೆನ್ನಲ್ಲೇ ಬೆಳಗಾವಿಯಲ್ಲಿ ಮೊಳಗಿತು ‘ಡಿಕೆಶಿ ಸಿಎಂ’ ಕೂಗು!

ಮತ್ತೆ ಮುನ್ನೆಲೆಗೆ ಸಿಎಂ ಬದಲಾವಣೆ ಚರ್ಚೆ: ಯತೀಂದ್ರ ಹೇಳಿಕೆ ಬೆನ್ನಲ್ಲೇ ಬೆಳಗಾವಿಯಲ್ಲಿ ಮೊಳಗಿತು ‘ಡಿಕೆಶಿ ಸಿಎಂ’ ಕೂಗು!


ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಡಿಸೆಂಬರ್ 9: ಮುಖ್ಯಮಂತ್ರಿ ಸಿದ್ದರಾಮಯ್ಯ (ಸಿದ್ದರಾಮಯ್ಯ) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಎರಡೆರಡು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ತಮ್ಮ ನಡುವೆ ಯಾವುದೇ ಗೊಂದಲವಿಲ್ಲ. ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದ ನಂತರ ಕೆಲವು ದಿನಗಳ ಮಟ್ಟಿಗೆ ಕರ್ನಾಟಕ ಕಾಂಗ್ರೆಸ್ ಬಿಕ್ಕಟ್ಟು ತಿಳಿದುಕೊಂಡಂತೆ ಭಾಸವಾಗಿತ್ತು. ಆದರೆ, ಇದೀಗ ಬೆಳಗಾವಿಯಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದಕ್ಕೆ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಎಂಎಲ್ಸಿ ಯತೀಂದ್ರ ನೀಡಿರುವ ಹೇಳಿಕೆ.

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ್ದೆ ಯತೀಂದ್ರ, ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರಲಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ ಸದ್ಯಕ್ಕೆ ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು?


ಯತೀಂದ್ರ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, ಬಹಳ ಸಂತೋಷ. ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ, ಡಿಕೆ ಶಿವಕುಮಾರ್ ಅವರು ವಿಧಾನಸಭೆ ಅಧಿವೇಶನದಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ”ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸ್ವಾಗತ” ಎಂಬ ಘೋಷಣೆಗಳು ಮೊಳಗಿವೆ.

ಸಂಚಲನ ಮೂಡಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್!

ಚನ್ನರಾಜ್ ಪೋಸ್ಟ್

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬೆಳಗಾವಿ ಸ್ವಾಗತ ಕೋರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಎಂಎಲ್ ಸಿ ಚನ್ನರಾಜ್, ‘ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್’ ಎಂದಿರುವುದು ಗಮನ ಸೆಳೆದಿತ್ತು. ಸಾಮಾಜಿಕ ಮಾಧ್ಯಮ ಪೋಸ್ಟ್ ಬಗ್ಗೆ ವ್ಯಾಪಕ ಚರ್ಚೆ ಶುರುವಾಗುತ್ತಿದ್ದಂತೆಯೇ ಚನ್ನರಾಜ್ ಅದನ್ನು ತಿದ್ದುಪಡಿ ಮಾಡಲಾಗಿದೆ.

ನನ್ನ, ಮಧ್ಯೆ ಸಿಎಂ ಭಿನ್ನಾಭಿಪ್ರಾಯ ಇಲ್ಲ: ಡಿಕೆ ಶಿವಕುಮಾರ್

ಏತನ್ಮಧ್ಯೆ ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ‘ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಯತೀಂದ್ರ ಸಿದ್ದರಾಮಯ್ಯ ಏನು ಹೇಳಿಕೆ ಕೊಟ್ಟಿದ್ದಾರೆ ಗೊತ್ತಿಲ್ಲ. ನಾನು ಯತೀಂದ್ರ ಜೊತೆ ಮಾತನಾಡುತ್ತೇನೆ. ಜೊತೆಗೆ, ಹೈಕಮಾಂಡ್ ಯಾವಾಗ ಬರಲು ಹೇಳಿದೆ ಎಂದು ಕಂಡುಬಂದಿಲ್ಲ.

ಹೇಳಿಕೆ ಸಮರ್ಥಿಸಿಕೊಂಡ ಯತೀಂದ್ರ

ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ತಮ್ಮ ಹೇಳಿಕೆಯನ್ನು ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ನಾನು ಏನು ಹೇಳಬೇಕೋ ಎಲ್ಲವನ್ನೂ ಹೇಳಿದ್ದೇನೆ. ಮತ್ತೆ ಆ ವಿಷಯಕ್ಕೆ ಮಾತನಾಡುವುದು ಏನೂ ಇಲ್ಲ. ಯಾರು ಏನನ್ನೂ ಹೇಳಲಿ, ನಾನು ಹೇಳಬೇಕಾಗಿದ್ದನ್ನು ಹೇಳಿದ್ದೇನೆ. ನಾನು ಮತ್ತೆ ಪ್ರತಿಕ್ರಿಯೆ ಕೊಡಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಶಾಸಕರು ಸಿಎಲ್ ಪಿ ಸಭೆಯಲ್ಲಿ ಪ್ರಸ್ತಾಪ ಮಾಡುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತೀಂದ್ರ, ಯಾರು ಬೇಕಾದರೂ ಪ್ರಸ್ತಾಪ ಮಾಡಲಿ ಎಂದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *