
ಬೆಂಗಳೂರು, ಮಾರ್ಚ್ 12: ನಗರದ ಶಾಂಗ್ರೀಲಾ ಹೋಟೆಲ್ನಲ್ಲಿ ನಡೆದಿದೆ ಕಾಂಗ್ರೆಸ್ಶಾಸಕಾಂಗ ಪಕ್ಷದ ಭಾರಿ ಹೈಡ್ರಾಮಾಗೆ ಸಭೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮತ್ತು ಪರಿಷತ್ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರು ಕೈಗೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಹೀಗೆ ಮುಂದುವರಿದರೆ ಬಹಿರಂಗವಾಗಿ ಮಾತನಾಡುವುದಾಗಿಯೂ ಸೂಚಿಸಿದ್ದಾರೆ. ಮತ್ತೊಂದೆಡೆ ಪರಿಷತ್ ಸದಸ್ಯರು ಅನುದಾನಕ್ಕೆ ಬೇಡಿಕೆ ಇಟ್ಟ ಪ್ರಸಂಗವೂ ನಡೆದಿದೆ.
ಶಾಸಕರ ನಡುವೆಯೇ ಕಿತ್ತಾಟ
ಸಭೆಯಲ್ಲಿ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಹಾಗೂ ರಾಜೇಗೌಡ ನಡುವೆ ಭಾರಿ ವಾಗ್ವಾದ ನಡೆದಿದೆ. ಐಎಎಸ್ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ ವಿರುದ್ಧ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕಿಡಿ ಕಾರಿದ್ದು, ಪ್ರಭಾವಿಗಳ ಮಾತು ಕೇಳಿ ಕಿರುಕುಳ ಕೊಡುತ್ತಿದ್ದಾರೆ. ಪದೇ ಪದೇ ಟಾರ್ಗೆಟ್ ಮಾಡಿ ಭೂ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ನೋಟಿಸ್ ನೀಡುತ್ತಿದೆ. ಇದೇ ರೀತಿ ಹತ್ತಾರು ಸಲ ನೋಟಿಸ್ ತಿಳಿಸಿದೆ. ನೋಟಿಸ್ಗೆ ಉತ್ತರಿಸಿದರೂ ಕ್ಯಾರೆ ಅಂತಿಲ್ಲ. ನಾನು ಮೂರು ಸಲ ಶಾಸಕನಾಗಿದ್ದೇನೆ, ನನಗೆ ಹೀಗಾದರೆ ಏನು ಮಾಡಲಿ? ಹೀಗಾಗಿ ಐಎಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾರಾಯಣಸ್ವಾಮಿ ಸೂಚಿಸಿದ್ದಾರೆ. ಈ ವೇಳೆನಾರಾಯಣಸ್ವಾಮಿ ಮಾತಿಗೆ ಶೃಂಗೇರಿ ಶಾಸಕ ರಾಜೇಗೌಡ ಟಾಂಗ್ ನೀಡಿದ್ದು, ರಾಜೇಂದ್ರ ಕುಮಾರ್ ಕಟಾರಿಯಾ ಒಳ್ಳೆಯ ಅಧಿಕಾರಿ. ರಾಜೇಗೌಡ ಮಾತಿಗೆ ಕೆರಳಿದ ನಾರಾಯಣಸ್ವಾಮಿ ಏಯ್.. ನಿಮಗೇನ್ರಿ ಗೊತ್ತು ನೋವು? ನೋಟಿಸ್ ಕೊಟ್ಟಿರೋದು ನಿಮಗಾ? ಎಂದು ಪ್ರಶ್ನಿಸೋದು ವಾಗ್ವಾದಕ್ಕೆ.
ಇದನ್ನೂ ಓದಿ: ಕುರ್ಚಿ ಕಾದಾಟದ ನಡುವೆಯೂ ಡಿಕೆಶಿ ಗುಣಗಾನ ಮಾಡಿದ ಸಿದ್ದರಾಮಯ್ಯ; ಕಾರಣ ಇಲ್ಲಿದೆ
‘ನಮ್ಮ ಮರ್ಯಾದೆ ಏನಾಗಬೇಡ?’
ಇನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಸಿ, ಎಸ್ಪಿ ವಿಚಾರವೂ ಪ್ರಸ್ತಾಪವಾಗಿದೆ. ಜಿಲ್ಲೆಗಳಿಗೆ ಜಿಲ್ಲಾಧಿಕಾರಿ, ಎಸ್ಪಿಗಳನ್ನು ನೇಮಿಸುವ ಸಂಬಂಧ ಸೌಜನ್ಯಕ್ಕೂ ಶಾಸಕರ ಬಳಿ ಒಂದು ಮಾತು ಕೇಳುವುದಿಲ್ಲ. ಸಚಿವರು, ಪ್ರಭಾವಿಗಳ ಮಾತು ಕೇಳಿ ವರ್ಗಾವಣೆ ಮಾಡಲಾಗುತ್ತೆ. ಕ್ಷೇತ್ರದಲ್ಲಿ ನಾವು ಹೇಳಿದ ಕೆಲಸಗಳೇ ಆಗಲ್ಲ. ವಿಪಕ್ಷದವರ ಕೆಲಸಗಳನ್ನು ಡಿಸಿ, ಎಸ್ಪಿಗಳು ಮಾಡಿಕೊಡುತ್ತಾರೆ. ಹೀಗಾದರೆ ಕ್ಷೇತ್ರದಲ್ಲಿ ನಮ್ಮ ಮರ್ಯಾದೆ ಏನಾಗಬೇಡ ಎಂದು ಕೆಲ ಶಾಸಕರು ಪ್ರಶ್ನಿಸಿದ ಪ್ರಸಂಗವೂ ನಡೆದಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.