ಹುಲಿ ದಾಳಿ ತಡೆಗೆ ಮಾಸ್ಕ್ ವಿತರಣೆ
ಮೈಸೂರು, ನವೆಂಬರ್ 17: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವ್ಯಾಘ್ರನ ಆರ್ಭಟ ಮುಂದುವರಿದಿದ್ದು, ಮೇಲಿಂದ ಮೇಲೆ ಹುಲಿ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ನಡುವೆ ಕಾಡಿನಿಂದ ನಾಡಿಗೆ ಬಂದಿರೋದು ಒಂದೆರಡಲ್ಲ, ಬರೋಬ್ಬರಿ 20 ಹುಲಿಗಳು ಎನ್ನುವ ವಿಚಾರ ಜನರ ನಿದ್ದೆಗೆಡಿಸಿದೆ. ಹೀಗಾಗಿ ಕಾಡಂಚಿನ ಗ್ರಾಮಗಳ ರೈತರು ಮತ್ತು ದನಗಾಹಿಗಳ ಮೇಲೆ ಹುಲಿ ದಾಳಿ ತಪ್ಪಿಸಲು ಅರಣ್ಯ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಮುಖವಾಡಗಳ ವಿತರಣೆಯನ್ನು ಮಾಡಿದೆ.
ಮುಖವಾಡ ವಿತರಣೆ ಯಾಕೆ?
ಸಾಮಾನ್ಯವಾಗಿ ಹುಲಿಗಳು ಜಾನುವಾರುಗಳ ಮೇಲೆ ದಾಳಿ ಮಾಡುತ್ತವೆ. ಮನುಷ್ಯನ ಮೇಲೆ ದಾಳಿ ನಡೆಸುವುದಿಲ್ಲ. ಒಂದು ವೇಳೆ ಆತ ಕುಳಿತುಕೊಂಡಿದ್ದರೆ ಅಥವಾ ಬಗ್ಗಿರುವ ಸ್ಥಿತಿಯಲ್ಲಿ ಕಂಡು ಬಂದರೆ ಹಿಂಬದಿಯಿಂದ ಅವು ದಾಳಿ ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಹುಲಿ ದಾಳಿ ತಪ್ಪಿಸುವ ಮುಖವಾಡಗಳನ್ನು ಒದಗಿಸಲಾಗಿದೆ. ಬರೋಬ್ಬರಿ 10 ಸಾವಿರ ಮಾಸ್ಕ್ ಅನ್ನು ರೈತರಿಗೆ ಅರಣ್ಯ ಇಲಾಖೆ ವಿತರಿಸಿದೆ. ಪಶ್ಚಿಮ ಬಂಗಾಳದ ಸುಂದರ್ಬನ್ಸ್ ಪ್ರದೇಶದ ಸಮುದಾಯದಲ್ಲಿ ಹುಲಿದಾಳಿಯಿಂದ ತಪ್ಪಿಸಿಕೊಳ್ಳಲು ಮುಖವಾಡ ಧರಿಸುವ ಈ ಕ್ರಮವು ಚಾಲ್ತಿಯಲ್ಲಿದೆ, ಇದರಿಂದ ರಾಜ್ಯದ ಅರಣ್ಯ ಇಲಾಖೆಯು ಪ್ರೇರಿತವಾಗಿದೆ.
ಇದನ್ನೂ ಓದಿ: ಕಾರ್ಯಾಚರಣೆ ವೇಳೆ ಮೈ ಮೇಲೆ ಎಗರಿದ ಹುಲಿ, ಹೊರಬಂದು ರೈತನ ಕಣ್ಣು ಗುಡ್ಡೆಗಳು
ನಿರಂತರ ಕೋಂಬಿಂಗ್ ಹಾಗೂ ಸುಮಾರು 10 ಹುಲಿಗಳನ್ನು (ಮರಿಗಳು ಸೇರಿ) ಹಿಡಿದಿದ್ದರೂ, ಕಾಡಂಚಿನ ಗ್ರಾಮಸ್ಥರು ಹುಲಿಗಳ ಸಂಚಾರವನ್ನು ಕಂಡಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ಹೀಗಾಗಿ ತಮ್ಮ ಹೊಲಗಳಿಗೆ ಕೃಷಿ ಕಾರ್ಯ ಅಥವಾ ಪಶುಗಳನ್ನು ಮೇಯಿಸಲು ಹೋಗಲೂ ಜನ ಭಯಪಡುತ್ತಿದ್ದಾರೆ. ಹುಲಿಗಳು ಸಾಮಾನ್ಯವಾಗಿ ಹಿಂಬದಿಯಿಂದ ದಾಳಿ ಮಾಡುವ ಸ್ವಭಾವವನ್ನು ಹೊಂದಿರುವ ಕಾರಣ, ಸುಂದರ್ಬನ್ಸ್ ಆಸ್ಪತ್ರೆಯಲ್ಲಿ ಇಲ್ಲಿಯೂ ಅಳವಡಿಸುವ ಯತ್ನ ನಡೆದಿದೆ.
ಅರಣ್ಯ ಸಿಬ್ಬಂದಿ ಕಾಡಂಚಿನ ಗ್ರಾಮಗಳಿಗೆ ಭೇಟಿ ನೀಡಿ, ಮುಖವಾಡಗಳನ್ನು ಹಂಚುತ್ತಿದ್ದಾರೆ. ಕೃಷಿ ಮತ್ತು ಪಶುಸಂಗೋಪನೆ ಮಾಡಲು ತೆರಳುವ ರೈತರಿಗೆ ಮುಖವಾಡ ಯಾಕೆ ಧರಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕ ಪ್ರಕಟಣೆಗಳನ್ನು ಮಾಡಲಾಗುತ್ತಿದೆ. ಮುಖವಾಡಗಳ ಜೊತೆಗೆ, ಕಾಡು ಪ್ರಾಣಿಗಳ ಎದುರಿನಲ್ಲಿ ಹೇಗೆ ವರ್ತಿಸಬೇಕು? ಯಾವುದನ್ನು ಮಾಡಬೇಕು ಮತ್ತು ಯಾವುದನ್ನು ಮಾಡಬಾರದು ಎಂಬ ಮಾಹಿತಿಯನ್ನು ನೀಡಲಾಗುತ್ತಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.