
ಬೆಂಗಳೂರು, ಏಪ್ರಿಲ್ 10: ಒಂದನೇ ತರಗತಿ ದಾಖಲಾತಿಗೆ (1ನೇ ತರಗತಿ ಪ್ರವೇಶ) ಕಡ್ಡಾಯ 6 ವರ್ಷ ತುಂಬಿರಬೇಕು ಎಂಬ ಆದೇಶ ಸಂಘರ್ಷಕ್ಕೆ ಕಾರಣವಾಗಿತ್ತು. ಬಳಿಕ ಶಿಕ್ಷಣ ಇಲಾಖೆ ವಿನಾಯಿತಿ ನೀಡಿತ್ತು. ಆ ಬಳಿಕ ವಿರೋಧ ವ್ಯಕ್ತಪಡಿಸಿದ್ದರು, ಪ್ರತಿಭಟನೆ ಕೂಡ ಇತ್ತು. ಇದೀಗ 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ 60 ದಿನ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
2026-27ನೇ ಸಾಲಿನ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳಿಗೆ ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ ಜೂನ್ 1 ರಿಂದ ಗರಿಷ್ಠ 60 ದಿನಗಳ ಸಡಿಲಿಕೆಯನ್ನು ನೀಡಿ ಮಗುವಿನ ವಯಸ್ಸನ್ನು ಲೆಕ್ಕಹಾಕಿ ಶಾಲಾ ದಾಖಲಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಶಿಕ್ಷಣ ಇಲಾಖೆ ಟ್ವಿಟ್
2026-27ನೇ ಸಾಲಿನ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳಿಗೆ ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ ಜೂನ್ 1 ರಿಂದ ಗರಿಷ್ಠ 60 ದಿನಗಳ ಸಡಿಲಿಕೆಯನ್ನು ನೀಡಿ ಮಗುವಿನ ವಯಸ್ಸನ್ನು ಲೆಕ್ಕಹಾಕಿ ಶಾಲಾ ದಾಖಲಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದ ಮಗುವಿನ ಜನ್ಮದಿನವು ಜೂನ್ 1 ರಿಂದ… pic.twitter.com/C6ELmTxhUd
— ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ (@ShalaShikshana) ಏಪ್ರಿಲ್ 10, 2026
ಇದರಿಂದ ಮಗುವಿನ ಜನ್ಮದಿನವು ಜೂನ್ 1 ರಿಂದ ಮುಂದಿನ 60 ದಿನಗಳವರೆಗೆ ಒಳಗಿದ್ದರೆ (ಜುಲೈ 30 ರ ವರೆಗೆ), ಅಂತಹ ಮಕ್ಕಳಿಗೆ 1 ನೇ ತರಗತಿಗೆ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಪತ್ರ ಸಲ್ಲಿಸಿದ ಮನವಿಗಳನ್ನು ಪುರಸ್ಕರಿಸಿ, ಕರ್ನಾಟಕ ಶಿಕ್ಷಣ ಅಧಿನಿಯಮ 1983ರ ಕಲಾಂ 20ರ ಅಡಿಯಲ್ಲಿ ಈ ವಿಶೇಷ ಅವಕಾಶವನ್ನು ಕಲ್ಪಿಸಲಾಗಿದೆ.
ಇದನ್ನೂ ಓದಿ: 1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯಸ್ಸು 6 ವರ್ಷ ತುಂಬಿರಬೇಕಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ಒತ್ತಾಯಕ್ಕೆ ಮಣಿದು ಎರಡು ತಿಂಗಳ ವಿನಾಯಿತಿ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಘೋಷಿಸಿದ್ದರು. ಅದರಂತೆ ಇದೀಗ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. 60 ದಿನಗಳ ವಿನಾಯಿತಿ ಇದೆ, 5 ವರ್ಷ 10 ತಿಂಗಳ ಮಕ್ಕಳಿಗೆ 1ನೇ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.