ಮಹಾನಗರ ಪಾಲಿಕೆಗಳಲ್ಲಿ ಇನ್ನು ಇರಲ್ಲ ಆರೋಗ್ಯಾಧಿಕಾರಿ ಹುದ್ದೆ: ಕಾರಣ ಇಲ್ಲಿದೆ
ಹುಬ್ಬಳ್ಳಿ/ಧಾರವಾಡ, ಡಿಸೆಂಬರ್ 1: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ)ಒಳಗೊಂಡಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಹುದ್ದೆಯನ್ನು ಸರ್ಕಾರ ರದ್ದುಗೊಳಿಸಿದೆ. ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ (GBA) ಉಳಿದ ಎಲ್ಲಾ ಪಾಲಿಕೆಗಳಲ್ಲಿ 18 ಆರೋಗ್ಯಾಧಿಕಾರಿ ಹುದ್ದೆಗಳನ್ನು ರದ್ದುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
18 ಆರೋಗ್ಯಾಧಿಕಾರಿ ಹುದ್ದೆಗಳು ರದ್ದು
ರಾಜ್ಯದ ಹಲವು ಮಹಾನಗರ ಪಾಲಿಕೆಗಳು ಅನುದಾನಗಳಿಂದ ಆರೋಗ್ಯ ಕೇಂದ್ರಗಳನ್ನು ನಡೆಸುತ್ತವೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಯುಪಿಎಚ್‌ಸಿ) ಮೂಲಕ ಆರೋಗ್ಯ ಸೇವೆಗಳನ್ನು ನಿರ್ವಹಿಸುತ್ತದೆ ಮತ್ತು ಚಿಟಗುಪ್ಪಿ ಆಸ್ಪತ್ರೆ ಮತ್ತು ಹೆರಿಗೆ ಆಸ್ಪತ್ರೆಯನ್ನು ನಿರ್ವಹಿಸುತ್ತದೆ. ಈ ಆರೋಗ್ಯ ಕೇಂದ್ರಗಳ ನಿರ್ವಹಣೆಗಾಗಿ ಆರೋಗ್ಯಾಧಿಕಾರಿಗಳನ್ನು ನೇಮಿಸಿ, ಪಾಲಿಕೆಯ ಆರೋಗ್ಯ ವಿಭಾಗದ ಎಲ್ಲಾ ಚಟುವಟಿಕೆಗಳನ್ನು ಅವರಿಗೆ ವಹಿಸಲಾಗಿದೆ.
ಹೊಸ ಆದೇಶದಂತೆ ಜಿಬಿಎ ಉಳಿದ ಪಾಲಿಕೆಗಳ 18 ಆರೋಗ್ಯಾಧಿಕಾರಿ ಹುದ್ದೆಗಳನ್ನು ರದ್ದುಪಡಿಸಿ ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಹಿರಿಯ ಪ್ರೋಗ್ರಾಮರ್ ಮತ್ತು ಆಡಳಿತಾಧಿಕಾರಿ ಹುದ್ದೆಗಳಾಗಿ ಮರುನಾಮಕರಣ ಮಾಡಲಾಗಿದೆ. ಆರೋಗ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ಗಳ ಅಧೀನದಲ್ಲಿ ನಡೆಯಲಿದೆ. ಹುದ್ದೆ ಮರುನಾಮಕರಣವಾದರೂ ಸಿಬ್ಬಂದಿಯ ವೇತನ ಶ್ರೇಣಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ ಕುರಿತು ಅಗತ್ಯವಾದ ಟಿಪ್ಪಣಿಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.