ಮಾಜಿ ಸಿಎಂ ಬಸವರಾಜ ಬೊಮ್ಮಾಯಿಚಿತ್ರದ ಕ್ರೆಡಿಟ್ ಮೂಲ: scroll.in
ಬೆಂಗಳೂರು, ಫೆಬ್ರವರಿ 11: ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ಮ್ಯಾಗ್ನೆಟ್ ಯೋಜನೆ ಜಾರಿಗೆ ಬಂದಿದೆ. ಆ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ಚರ್ಚೆಗಳು ನಡೆಯುತ್ತಿವೆ. ಸದ್ಯ ಈ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (ಬಸವರಾಜ್ ಎಸ್ ಬೊಮ್ಮಾಯಿ)
ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದೆ. ಇದನ್ನು ಖಂಡಿಸುತ್ತೇನೆ, ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಬೊಮ್ಮಾಯಿ
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಮಾಜಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಮೇಲಿಂದ ಮೇಲೆ ಸೋಲುತ್ತ ಅವರ ನಾಯಕ ಹತಾಶರಾಗಿದ್ದಾರೆ. ಹೀಗಾಗಿ ಸಂಸತ್ತಿನಲ್ಲಿ ಅವರು ನಗರ ನಕ್ಸಲರಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್
ಕರ್ನಾಟಕದ ಆರ್ಥಿಕ ಸ್ಥಿತಿ ಅತಂತ್ರ ಸ್ಥಿತಿಯಲ್ಲಿದೆ ಎಂಬ ಕಾರಣಕ್ಕೆ ಅವರು 638 ಶಾಲೆಗಳನ್ನು ಮುಚ್ಚಿದ್ದಾರೆ. ಸಂಬಳ ನೀಡಲು ಸಾಧ್ಯವಾಗದೆ ಸಂಸ್ಥೆಗಳನ್ನು ಮುಚ್ಚುತ್ತಿದ್ದಾರೆ. ಇದು ಕನ್ನಡ ವಿರೋಧಿ ಶಿಕ್ಷಣ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಈ ಶಾಲೆಗಳನ್ನು ಪುನರಾರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ.
ಆನ್ @ಕಿರೆನ್ ರಿಜಿಜು ಅವರ ಹೇಳಿಕೆ:… pic.twitter.com/S4EdTxKGOl
— ಬಸವರಾಜ ಎಸ್ ಬೊಮ್ಮಾಯಿ (@BSBommai) ಫೆಬ್ರವರಿ 11, 2026
ಬೆಂಚುಗಳ ಮೇಲೆ ನಿಲ್ಲುವುದು, ಸ್ಪೀಕರ್ ಮೇಲೆ ದಾಳಿ ಮಾಡುವುದು ಮಿತಿಮೀರಿದೆ. ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಮಂತ್ರಿಯ ಆಸನದವರೆಗೆ ಬಂದು ಅವರು ಬರುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಸಂಸತ್ತಿನ ಇತಿಹಾಸದಲ್ಲಿ ಯಾವತ್ತು ಆಗಿರಲಿಲ್ಲ.
ಇದನ್ನೂ ಓದಿ: ಇದು ಬಾಗಿಲು ಮುಚ್ಚದ ಸರ್ಕಾರಿ ಶಾಲೆ, ಅಧ್ಯಾಪಕರಿಗೆ ಶಿಫ್ಟ್‌ನಲ್ಲಿ ಕೆಲಸ! SSLC ಫಲಿತಾಂಶವನ್ನು ಹೆಚ್ಚಿಸಲು ವಿನೂತನ ಪ್ರಯೋಗ
ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಲಾಪವನ್ನು ಸುಗಮವಾಗಿ ನಡೆಸಲು ಬಿಡುತ್ತಾರೆ ಎಂಬ ನಂಬಿಕೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಹೇಳುತ್ತಾರೆಂದು ಗೊತ್ತಿಲ್ಲ. ಆದರೆ, ಅವರ ಜನರ ಸಮಸ್ಯೆಯ ಬಗ್ಗೆ ಮಾತನಾಡುವುದಿಲ್ಲ. ಅವರು ತೊಂದರೆ ಕೊಡುವುದನ್ನೇ ಅಜೆಂಡಾ ಮಾಡಿಕೊಂಡಿದ್ದಾರೆ. ಅದೇ ಆಗಬಹುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.