ಬೆಂಗಳೂರು, (ನಂಬರ್ 20): ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ (ಸಂಚಾರ ಉಲ್ಲಂಘನೆ ದಂಡ) ಮೇಲೆ 50% ರಿಯಾಯಿತಿ ನೀಡಲಾಗಿದೆ. ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಇಂದು (ನವೆಂಬರ್ 20) ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಸೌಲಭ್ಯವು ನಾಳೆಯಿಂದ ಅಂದರೆ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರುತ್ತದೆ, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ಮೊತ್ತವನ್ನು ಅರ್ಧ ಮೊತ್ತಕ್ಕೆ ಪಾವತಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಸ್ವೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ. ಕಳೆದ ಬಾರಿ ದಂಡ ನೀಡುತ್ತಿರುವ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿತ್ತು. ಈ ಇದೀಗ ಮತ್ತೊಮ್ಮೆ ಈಫರ್ ನೀಡಲಿದೆ, ಸರ್ಕಾರದ ಆದೇಶದಂತೆ ನಾಳೆಯಿಂದಲೇ ಅಂದರೆ ನವೆಂಬರ್ 21 ರಿಂದ ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ, ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಡೆಯಬಹುದು.
ಎಲ್ಲಿ ದಂಡ ಕಟ್ಟಬೇಕು?
ದಂಡ ಪಾವತಿಯನ್ನು ಉಳಿಸಿಕೊಂಡಿರುವ ವಾಹನ ಸವಾರರು ಬೆಂಗಳೂರಿನಲ್ಲಿ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ವೆಬ್ಸೈಟ್ಗಳಲ್ಲಿ ವಿವರ ಪಡೆಯಬಹುದು. ಜಿಲ್ಲೆಗಳಲ್ಲಿ ಸಮೀಪದ ಪೊಲೀಸ್ ಠಾಣೆಗಳಿಗೆ ಖುದ್ದು ಭೇಟಿ ನೀಡಿ ರಿಯಾಯಿತಿ ದರದಲ್ಲಿ ದಂಡ ಕಟ್ಟಲಿಲ್ಲ. ಇನ್ನು ಆನ್ಲೈನ್ ಮೂಲಕ ಪಾವತಿ ಮಾಡುವವರು ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್ಪಿ) ಆಯಪ್ ಬಿಟಿಪಿ ಅಸ್ತ್ರಂ ಮುಖಾಂತರವೂ ಖುದ್ದಾಗಿ ದಂಡ ಪಾವತಿಸಿ ಎಂದು ಸಂಚಾರಿ ಠಾಣೆಗೆ ಕಳುಹಿಸಲಾಗಿದೆ.
ಸಂಚಾರ ನಿಯಮ ಉಲ್ಲಂಘನೆಯ ನೂರಾರು ಕೋಟಿ ರೂ. ದಂಡ ಕಟ್ಟದೆ ವಾಹನ ಸವಾರರು ಬಾಕಿ ಉಳಿಸಿಕೊಂಡಿದ್ದರು. ಹೀಗಾಗಿ, ಸಾರಿಗೆ ಇಲಾಖೆ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಜಂಟಿ ಸಭೆ ನಡೆಸಿ 2023ರಲ್ಲಿ ಮೊದಲ ಬಾರಿಗೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿಗೆ ಶಿಫಾರಸು ಮಾಡಿದೆ. ಇದಕ್ಕೆ ಸರ್ಕಾರ ಸಹ ಒಪ್ಪಿ ರಿಯಾಯಿತಿ ಘೋಷಿಸಿತ್ತು. ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ವಾಹನ ಸವಾರರು ಹೆಚ್ಚು ಆಸಕ್ತಿ ತೋರಿಸಿ ಮೊದಲ ಹಂತದಲ್ಲಿ ರಾಜ್ಯಾದ್ಯಂತ 120 ಕೋಟಿ ರೂ.ಗಳಿಗೆ ಹೆಚ್ಚು ದಂಡ ಪಾವತಿಯಾಗಿದೆ. ಬಳಿಕ ದಂಡ ಪಾವತಿ ಅವಧಿಯನ್ನು ಹಂತ- ಹಂತವಾಗಿ ವಿಸ್ತರಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ