Headlines

ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ?

ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ?


ಬೆಂಗಳೂರು, (ಏಪ್ರಿಲ್ 14) : 2026-27ನೇ ಸಾಲಿನ ಶಾಲಾ ಶೈಕ್ಷಣಿಕವಾಗಿ (ಶಾಲಾ ಶೈಕ್ಷಣಿಕ ವರ್ಷದ ವೇಳಾಪಟ್ಟಿ) ಪ್ರಕಟವಾಗಿದೆ. ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ಪ್ರಾಥಮಿಕ, ಪ್ರೌಢಶಾಲೆಗಳಿಗೆ 2026-27 ನೇ ಸಾಲಿನ ಶೈಕ್ಷಣಿಕ ಶೈಕ್ಷಣಿಕ ಅವಧಿ ಮತ್ತು ರಜಾ ಅವಧಿಯನ್ನು ನಿಗದಿಪಡಿಸಲಾಗಿದೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಗಾಗಿ ಪ್ರಕಟಿಸಲಾಗಿದೆ. ಮೇ 29 ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಮಕ್ಕಳ ಶಾಲೆಗಳಲ್ಲಿ ತರಗತಿಗಳು ಪ್ರಾರಂಭವಾಗಲಿವೆ.

ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದೆ, ಅಕ್ಟೋಬರ್ 3 ರಿಂದ 21, 2026 ರವರೆಗೆ ರಜೆ ಹಾಗೂ ಏಪ್ರಿಲ್ 11, 2027 ರಿಂದ ದಸರಾ ರಜೆಯನ್ನು ಪ್ರಕಟಿಸಲಾಗಿದೆ. 2027 ಜೂನ್ ಮೊದಲ ವಾರದಲ್ಲೇ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಗೆ ಆದೇಶ ನೀಡಿರುವ ಇಲಾಖೆಯು, ದಾಖಲಾತಿ ಅಭಿಯಾನದ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಮರಳಿ ಕರೆತರಲು ವಿಶೇಷ ಒತ್ತು ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಉದ್ಯೋಗಗಳು: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEA ಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ

ರಾಜ್ಯದ ಪ್ರಾಥಮಿಕ ಮತ್ತು ಶಿಕ್ಷಣಶಾಲೆಗಳಲ್ಲಿ 206-27ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳು, ಕರ್ತವ್ಯದ ದಿನಗಳು ಮತ್ತು ರಾಜಾನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದೆ, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಲು ಮತ್ತು ಅನುಪಾಲನೆ ಮಾಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

ಅಕ್ಟೋಬರ್ .3 ರಿಂದ ಅ.21ರವರೆಗೆ ರಜೆ

ಶಾಲೆಗಳ ಮೊದಲ ಅವಧಿ ಮೇ 29 ರಿಂದ ಅ.2 ರಿಂದ ಮತ್ತು ಎರಡನೇ ಅವಧಿ ಅಕ್ಟೋಬರ್ .22 ರಿಂದ 2027ರ ಏಪ್ರಿಲ್.10ರವರೆಗೆ. ಇನ್ನು ಅಕ್ಟೋಬರ್ .3 ರಿಂದ ಅ.21ರವರೆಗೆ ದಸರಾ ರಜೆ ಇರಲಿದೆ. . ಹೀಗಾಗಿ ಮಕ್ಕಳ ದಾಖಲಾತಿ ಕಾರ್ಯಕ್ರಮವು ಜೂನ್ 30 ರೊಳಗೆ ಪೂರ್ಣಗೊಳ್ಳಬೇಕು, ಶಾಲೆ ಬಿಟ್ಟಿರುವ 6 ವರ್ಷದಿಂದ 18 ವರ್ಷದ ಮರಳಿ ಶಾಲೆಗೆ ಕರೆತರಲು ದಾಖಲಾತಿ ಜಾಗೃತಿ ಅಭಿಯಾನವನ್ನು ನಡೆಸಬೇಕು ಎಂದು ತಿಳಿಸಲಾಗಿದೆ.

ಒಟ್ಟು 365 ದಿನಗಳಲ್ಲಿ 119 ರಜಾ ದಿನಗಳು

ಶೈಕ್ಷಣಿಕ ವರ್ಷದ ಒಟ್ಟು 365 ದಿನಗಳಲ್ಲಿ 119 ರಜಾ ದಿನಗಳಿರಲಿದ್ದು, 245 ಕರ್ತವ್ಯದ ದಿನಗಳನ್ನು ಪರಿಗಣಿಸಲಾಗಿದೆ. ಈ ದಿನಗಳಲ್ಲಿ ಪರೀಕ್ಷೆಗಳು ಮತ್ತು ಮೌಲ್ಯಾಂಕನ ಕಾರ್ಯಗಳಿಗಾಗಿ 26 ದಿನಗಳು, ಪಠ್ಯೇತರ ಚಟುವಟಿಕೆಗಳ ನಿರ್ವಹಣೆಗಾಗಿ 24 ದಿನಗಳು, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನಗಳು, ಶಾಲಾ ಸ್ಥಳೀಯ ರಜೆ 4 ದಿನಗಳು ಮತ್ತು ಕಲಿಕಾ ಪ್ರಕ್ರಿಯೆಗೆ 181 ದಿನಗಳನ್ನು ಮೀಸಲಿಡಲಾಗಿದೆ. ಇನ್ನುಳಿ ದಾಖಲಾತಿ ಆಂದೋಲನ, ಶಾಲಾ ಪ್ರಾರಂಭೋತ್ಸವ ಕುರಿತು ಎಂದಿನಂತೆ ಚಟುವಟಿಕೆಯನ್ನು ತೋರಿಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *