Headlines

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ


ಬೆಂಗಳೂರು, (ಫೆಬ್ರವರಿ 03): ಕರ್ನಾಟಕದ 12ನೇ ತರಗತಿಯಿಂದ 1 ನೇ ತರಗತಿ (ವಿದ್ಯಾರ್ಥಿಗಳು) ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಡಿ (ವಿದ್ಯಾ ವಿಕಾಸ್ ಯೋಜನೆ) ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್ (ಪಠ್ಯ ಮತ್ತು ಟಿಪ್ಪಣಿ Bo0k) ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು..2026 -27 ನೇ ಸಾಲಿನ 1 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ ಶಾಲಾ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಮತ್ತು ಪಿಯುಸಿ ಉಚಿತ ಪಠ್ಯಪುಸ್ತಕಕ್ಕೆ ಅನುಮೋದನೆ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಶುಭಮಂಗಳಾ ಅವರು ಆದೇಶ ಹೊರಡಿಸಿದ್ದಾರೆ. ಈ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷ ಮಕ್ಕಳಿಗೆ ಅನುಕೂಲವಾಗಿದೆ.

ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಶಿಕ್ಷಣ ಇಲಾಖೆ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳು 1 ರಿಂದ 10 ನೇ ತರಗತಿಯವರೆಗೆ ಉಚಿತ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಮತ್ತು 1 ರಿಂದ 12 ನೇ ತರಗತಿಯವರೆಗೆ ದಿನಚರಿ ಪುಸ್ತಕ ವಿತರಣೆ ಶಿಕ್ಷಣ ಇಲಾಖೆಯು 30 ಕೋಟಿ 83 ಲಕ್ಷದ 25 ಸಾವಿರ ಹಣವನ್ನು ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದೆ. ಇದೀಗ ಶಿಕ್ಷಣ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆ ಸರ್ಕಾರ ಸಹ ಒಪ್ಪಿಗೆ ಸೂಚಿಸಿದ್ದು, 290.46 ಕೋಟಿ ರೂ ಅನುದಾನವನ್ನು ಶಾಲಾ ಶಿಕ್ಷಣ ಇಲಾಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಇದರಲ್ಲೇ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಶುಭ ಮಂಗಳ ಆದೇಶ ಹೊರಡಿಸಿದ್ದಾರೆ. ಇನ್ನು ಪಠ್ಯ ಪುಸ್ತಕದ ಕಾಗದ ಮತ್ತು ಮುದ್ರಣ ಗುಣಮಟ್ಟ ರಾಜಿ ಆಗೋ ಹಾಗಿಲ್ಲ . ಹೆಚ್ಚುವರಿ ಪುಸ್ತಕಕ್ಕೆ ಬೇಡಿಕೆ ಸಲ್ಲಿಸಿ ಕಳ್ಳಾಟ ಆಡೋ ಹಾಗಿಲ್ಲ . ಸರ್ಕಾರದ ಹಣ ದುರುಪಯೋಗ ಮಾಡಿದ್ರೆ ಕಠಿಣ ಕ್ರಮ ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಭಾಗ್ಯ!

ಪೋಷಕರ ಹೊರೆ ಇಳಿಸಿದ ಸರ್ಕಾರ

ಇನ್ನು 1 ರಿಂದ 12 ನೇ ತರಗತಿ ಸರ್ಕಾರದ ಕಡೆಯಿಂದಲೇ ಪುಸ್ತಕ ಹಾಗೂ ನೋಟ್ ಬುಕ್ ನೀಡುವುದರಿಂದ ಪೋಷಕರ ಹೊರೆ ತಪ್ಪಲಿದೆ. 1 ರಿಂದ 10 ನೇ ತರಗತಿ ಮಕ್ಕಳಿಗೆ ಪಠ್ಯ ಪುಸ್ತಕ ನೀಡಲಾಗಿದ್ದರೂ ಕಡ್ಡಾಯ ನೋಟ್ ಬುಕ್ ಕೊಡಿಸಬೇಕಿತ್ತು. ಇನ್ನೂ 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಹ ಪುಸ್ತಕ ನೀಡುವುದರಿಂದ ಪೋಷಕರ ಹೊರೆ ಕಡಿಮೆಯಾಗಲಿದೆ.

ಆದೇಶದಲ್ಲೇನಿದೆ?

ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕದಿಂದ ದ್ವಿಭಾಷಾ ಬಾಲ ಚೇತನ ಚಟುವಟಿಕೆ ಪುಸ್ತಕಗಳು, ಸರ್ಕಾರಿ ಶಾಲೆಗಳು 4 ರಿಂದ 9 ನೇ ತರಗತಿಯ ಕನ್ನಡ ಮಾಧ್ಯಮ ಅಭ್ಯಾಸ ಪುಸ್ತಕ ಮತ್ತು ಸರ್ಕಾರಿ ಶಾಲಾ ಕಾಲೇಜುಗಳ ಪೂರ್ವ ಪ್ರಾಥಮಿಕ ತರಗತಿಗಳಿಂದ 12 ನೇ ತರಗತಿಯವರೆಗಿನ ದಿನಚರಿ ಪುಸ್ತಕ ಮತ್ತು 10 ನೇ ತರಗತಿಯವರೆಗಿನ ಶಿಕ್ಷಣ ಪುಸ್ತಕಗಳನ್ನು ವಿತರಿಸಲು ಸೂಚಿಸಲಾಗಿದೆ.

ಕೆಟಿಪಿಪಿ ಕಾಯ್ದೆ 1999ರ ಅಡಿ ರೂಪಿಸಿದ ನಿಯಮಗಳಂತೆ ಪಾರದರ್ಶಕ ಟೆಂಡರ್ ಕರೆದು ಕರ್ನಾಟಕ ಪುಸ್ತಕ ಸಂಘದ ಮೂಲಕ ಮುದ್ರಿಸಿ ವಿತರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಲಾಗಿದೆ. ಒಟ್ಟು 264.62 ಕೋಟಿ ವೆಚ್ಚದಲ್ಲಿ ವಿದ್ಯಾ ವಿಕಾಸ ಯೋಜನೆ ಅಡಿ ಪುಸ್ತಕಗಳ ವಿತರಣೆಗೆ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕದಡಿ ಹೊಸದಾಗಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳಿಗೆ 25.841 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಶೈಕ್ಷಣಿಕ ಪ್ರಾರಂಭದಲ್ಲೇ ಪಠ್ಯಪುಸ್ತಕಗಳನ್ನು ವಿತರಿಸಬೇಕು. ಎಸ್‌ಎಟಿಎಸ್ ಮೂಲಕ ಶಾಲೆಗಳಿಂದ ಪಠ್ಯಪುಸ್ತಕಗಳ ಬೇಡಿಕೆಯ ಮಾಹಿತಿ ಪಡೆದು ಎಲ್ಲಾ ವಿವರಗಳನ್ನು ದಾಖಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *