22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್

22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್:  ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್


ಬೆಂಗಳೂರು, (ಜನವರಿ 09): ರಾಜ್ಯ ಸರ್ಕಾರ 22 ಮಸೂದೆಗಳನ್ನು ಕಳಿಸಿದೆ (ಬಿಲ್‌ಗಳು) ಮೇಲಕ್ಕೆ 19ಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್) ಅಂಕಿತ ಹಾಕಿದ್ದಾರೆ. ಆದರೆ, ತೀವ್ರ ವಿವಾದಕ್ಕೆ ಕಾರಣವಾಗಿರುವ ದ್ವೇಷ ಭಾಷಣವನ್ನು ಪೆಂಡಿಂಗ್ ಇಟ್ಟಿದ್ದು, 2 ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಲಾಗಿದೆ. ಈ ಸಂಬಂಧ ಇಂದು (ಜನವರಿ 09) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಹಾಗೂ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ವಿಧೇಯಕಗಳನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ.

ದ್ವೇಷ ಭಾಷಣ ಬಿಲ್ ಪೆಂಡಿಂಗ್

ಮಂಡನೆಯಾಗಿ ಪಾಸ್ ಆಗುತ್ತಿದೆ. ಇದರ ಬೆನ್ನಲ್ಲೇ ಈ ಮಸೂದೆಗೆ ಅಂಕಿತ ಹಾಕುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದರು. ಇದರ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ದ್ವೇಷ ಮಸೂದೆಗೆ ಅಂಕಿತವೂ ಹಾಕದೇ ವಾಪಸ್ಸು ಕಳಿಸದೇ ಪೆಂಡಿಂಗ್ ಇಟ್ಟಿದ್ದಾರೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ವಿಧೇಯಕ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ದ್ವೇಷ ಭಾಷಣ ಮಸೂದೆ ಬಗ್ಗೆ ಕಾನೂನು ಜೊತೆ ಚರ್ಚಿಸಲು ರಾಜ್ಯಪಾಲರು ಚಿಂತನೆ ನಡೆಸುತ್ತಿದ್ದಾರೆ. ರಾಷ್ಟ್ರಪತಿಗಳ ದ್ವೇಷ ಭಾಷಣವನ್ನು ಕಳಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ದ್ವೇಷ ಭಾಷಣ ವಿಧೇಯಕ ರಿಜೆಕ್ಟ್ ಮಾಡಲು ಸಾಕಾಗುವುದಿಲ್ಲಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ?

ಒಳಮೀಸಲಾತಿ ಮಸೂದೆ ವಾಪಸ್

ಇನ್ನು ಒಳಮೀಸಲಾತಿ ಹಂಚಿಕೆಗೆ ಕಾನೂನು ಮಾನ್ಯತೆ ಕೊಡುವ ಪರಿಶಿಷ್ಟ ವರ್ಗಗಳ ಮಸೂದೆಯ ಬಗ್ಗೆ ಹೆಚ್ಚಿನ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ವಿಧೇಯಕ ವಾಪಸ್ ಕಳಿಸಿದ್ದಾರೆ. ಶೇ.17ರಷ್ಟು ಎಸ್‌ಸಿ ಮೀಸಲಾತಿಯನ್ನು ಒಳಪಂಗಡಗಳಿಗೆ 6+6+5ರ ಅನುಪಾತದಲ್ಲಿ ಹಂಚಿಕೆ ಮಾಡಲಾಗಿದೆ. ಒಳಮೀಸಲಾತಿಗೆ ಕಾನೂನಾತ್ಮಕ ತೊಡಕು ಬರದಿರಲು ಸರ್ಕಾರ ಮಸೂದೆ ತಂದಿತ್ತು. ಆದರೆ ಇಂದಿರಾ ಸಹಾನಿ ಪ್ರಕರಣದಲ್ಲಿ ಸಾಮಾನ್ಯ ಮೀಸಲಾತಿ ಪ್ರಮಾಣ 50% ಮೀರಬಾರದೆಂಬ ತೀರ್ಪು ಇದೆ. ಈ ಹಿನ್ನೆಲೆ ರಾಜ್ಯಪಾಲರು ಹೆಚ್ಚಿನ ಸ್ಪಷ್ಟನೆ ಕೇಳಿದ್ದಾರೆ. ಸದ್ಯದಲ್ಲೇ ಸರ್ಕಾರ, ರಾಜ್ಯಪಾಲರಿಗೆ ಸ್ಪಷ್ಟೀಕರಣ ನೀಡಲಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 9:27 pm, ಶುಕ್ರ, 9 ಜನವರಿ 26



Source link

Leave a Reply

Your email address will not be published. Required fields are marked *