
ಬೆಂಗಳೂರು, ಮಾರ್ಚ್ 10: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆಯಂತಹ ಬೋಧಕೇತರ ಕೆಲಸಗಳಲ್ಲಿಯೂ ನಿರತವಾಗಿದೆ. ರಾಜ್ಯಾದ್ಯಂತ ಶಿಕ್ಷಕರ ಕೊರತೆ ಇದ್ದು, ಇಂತಹ ಸಂದರ್ಭದಲ್ಲಿ ಕಾಯುವ ಜವಾಬ್ದಾರಿಯನ್ನು ನೀಡುವುದು ಹಾಸ್ಯಾಸ್ಪದ. ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಪತ್ರ ಮುಖೇನ ಆಗಬೇಕು.
ಹೊರಟ್ಟಿ ಬರೆದ ಪತ್ರದಲ್ಲೇನಿದೆ?
ರಾಜ್ಯದ ಎಲ್ಲಾ ಶಿಕ್ಷಕರ ಮತದಾನದ ಕೆಲಸಗಳು, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ, ಮಕ್ಕಳಿಗೆ ಹಾಲು, ಮೊಟ್ಟೆ ವಿತರಣೆ ಮುಂತಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಅವುಗಳ ಜೊತೆಗೆ ಸರ್ಕಾರವು ಬೀದಿ ನಾಯಿಗಳನ್ನು ಕಾಯುವ ಹೊಣೆಗಾರಿಕೆಯನ್ನು ಶಿಕ್ಷಕರಿಗೆ ನೀಡಿರುವ ಕುರಿತು ದಿನಪತ್ರಿಕೆಯಲ್ಲಿ ವರದಿ ಪ್ರಕಟಿಸಿದೆ, ಸರ್ಕಾರದ ಈ ಕ್ರಮ ನಿಜಕ್ಕೂ ಬಹಳ ಬೇಸರದ ಸಂಗತಿಯಾಗಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಂದಾಗಿರುವ ಸರ್ಕಾರವು, ಶಾಲಾ ಶಿಕ್ಷಕರನ್ನು ನೋಡೆಲ್ ಅಧಿಕಾರಿಗಳು ನೇಮಕ ಮಾಡುವಂತೆ ಸೂಚಿಸಲಾಗಿದೆ. ಇದು ಸರ್ಕಾರವು ಶಿಕ್ಷಕರನ್ನು ನಾಯಿ ಕಡೆಯದಾಗಿ ನೋಡುತ್ತಿದೆ ಎಂಬ ಅರ್ಥದಲ್ಲಿ ಬಿಂಬಿತವಾಗುತ್ತದೆ.
ಇದನ್ನೂ ಓದಿ: ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್; ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ
ಶಿಕ್ಷಕರು ಹಲವು ಕೆಲಸಗಳನ್ನು ನಿರ್ವಹಿಸುತ್ತಿರುವ ಕಾರಣ, ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹೆಚ್ಚು ಗಮನ ಹರಿಸಲು ಆಗುತ್ತಿಲ್ಲ. ಈ ಮಕ್ಕಳ ಕಲಿಕೆಯ ಗುಣಮಟ್ಟ ಕಡಿಮೆಯಾಗಿ ಫಲಿತಾಂಶವು ಸಹ. ಪ್ರಸ್ತುತ ರಾಜ್ಯಾದ್ಯಂತ ಶಿಕ್ಷಕರ ಕೊರತೆ ಕಾಣುತ್ತಿದೆ. ರಾಜ್ಯದ ಜೊತೆಗೆ ಸರ್ಕಾರವು ಜನಗಣತಿ ಸರ್ಕಾರದ ಕೇಂದ್ರವನ್ನು ಪ್ರಾರಂಭಿಸಲು ಈ ಶಿಕ್ಷಕರಿಗೆ ಹಾಜರಾಗಬೇಕಿದೆ. ಶಿಕ್ಷಕರ ಕೊರತೆಯ ನಡುವೆ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಿಗೆ ಅವರನ್ನು ಸೂಚಿಸುವುದರ ಜೊತೆಗೆ ಈಗ ಬೀದಿ ನಾಯಿಗಳ ನಿಯಂತ್ರಣ ಅವರಿಗೆ ನೀಡಲು ಹೊರಟ ಕ್ರಮ ನಿಜಕ್ಕೂ ಹಾಸ್ಯಾಸ್ಪದ. ಹೀಗಾಗಿ ಈ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಹೊರಟಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.