Headlines

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಹತ್ತಿಕ್ಕಲು ಹೊರಟ ಸರ್ಕಾರ

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಹತ್ತಿಕ್ಕಲು ಹೊರಟ ಸರ್ಕಾರ


ಬೆಂಗಳೂರು, ಫೆಬ್ರವರಿ 18: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಪತ್ರ ಬರೆದಿದೆ. ಈ ಪತ್ರದ ಪ್ರಕಾರ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (ಬೈಟ್) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರ ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ಪಡೆಯುವುದನ್ನು ನಿಷೇಧಿಸಬೇಕು ಎಂದು ಹೇಳಲಾಗಿದೆ.

ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಖಂಡಿಸಿದ್ದಾರೆ. ಮಾಧ್ಯಮಗಳು ಜನರ ಮತ್ತು ಸರ್ಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ. ಕಳೆದ ವಾರ ವಿಧಾನಸೌಧದಲ್ಲಿ ನಡೆದ ಭದ್ರತಾ ಲೋಪಗಳನ್ನು (ಚಿನ್ನ ಕಳ್ಳತನದಂತಹ ಘಟನೆಗಳು) ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ನೆಪವಾಗಿ ಬಳಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರವು ತನ್ನ ಲೋಪಗಳನ್ನು ಸರಿಪಡಿಸಿಕೊಳ್ಳುವ ಬದಲು ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುತ್ತಿರುವುದು ಸರಿಯಲ್ಲ ಎಂದು ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ಇದು ಕಾಂಗ್ರೆಸ್ ಪಕ್ಷವು ತುರ್ತು ಪರಿಸ್ಥಿತಿಯ ಸಮಯದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದ ಇತಿಹಾಸವನ್ನು ನೆನಪಿಸುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *