ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿವೆ ಹಲವು ಸವಾಲುಗಳುಚಿತ್ರದ ಕ್ರೆಡಿಟ್ ಮೂಲ: ಗೂಗಲ್
ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸಿದ್ದರಾಮಯ್ಯ ನೇಮಕಾತಿ ಪ್ರಕ್ರಿಯೆಗಳನ್ನು ಹಂತ ಹಂತವಾಗಿ ಶೀಘ್ರ ನಡೆಸುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಹುದ್ದೆಗಳು ಖಾಲಿಯಾಗಿವೆ ಎಂದು ಅವರು ಆರೋಪಿಸಿದ್ದರು. ಅವರ ಈ ಹೇಳಿಕೆ ರಾಜಕೀಯ ಕಚ್ಚಾಟಕ್ಕೂ ಕಾರಣವಾಗಿತ್ತು. ಅಸಲಿಗೆ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರದ ಮುಂದೀಗ ಸಾಲುಗಳಿವೆ.
ಸರ್ಕಾರದ ಮುಂದಿರುವ ಸವಾಲುಗಳೇನು?
43 ಇಲಾಖೆಗಳಲ್ಲಿ ಸುಮಾರು 2.84 ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ ಇದ್ದರೆ, ನಿಗಮ ಮತ್ತು ಮಂಡಳಿಗಳನ್ನು ಸೇರಿಸಿದರೆ ಇವುಗಳ ಸಂಖ್ಯೆ 4 ಲಕ್ಷಕ್ಕೂ ಹೆಚ್ಚು. ಆದರೆ ಇವುಗಳ ಭರ್ತಿಗೆ ಅನೇಕ ತೊಡಕುಗಳು ಸರ್ಕಾರಕ್ಕೆ ಇವೆ. ಪರಿಶಿಷ್ಟ ಜಾತಿ ಆಂತರಿಕ ಮೀಸಲಾತಿ ನೀಡುವ ವಿಚಾರದ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಒಳ ಮೀಸಲಾತಿ ಬಿಲ್ ಪಾಸ್ ಮಾಡಿದ್ರೂ ರಾಜ್ಯಪಾಲರಿಂದ ಒಪ್ಪಿಗೆ ಸಿಕ್ಕಿಲ್ಲ. ಕೆಲವು ಅಂಶಗಳ ಕುರಿತು ಸ್ಪಷ್ಟನೆ ಕೋರಿ ಅವರು ವಾಪಸ್ ಕಳುಹಿಸಿದ್ದಾರೆ. ಇದರಿಂದ ಒಳ ಮೀಸಲಾತಿ ಇತ್ಯರ್ಥವಾಗದೆ ನೇಮಕಾತಿ ಮಾಡುವುದು ಸವಾಲಾಗಿದೆ. PSI ಹಗರಣದಂತಹ ದೊಡ್ಡ ಅಕ್ರಮ ವ್ಯವಸ್ಥೆ ಮೇಲಿನ ನಂಬಿಕೆ ಕುಗ್ಗಿಸಿರುವ ಜೊತೆಗೆ ಗ್ಯಾರಂಟಿ ಯೋಜನೆ ಅನುಷ್ಠಾನದ ನಡುವೆ ನೇಮಕಾತಿಯಿಂದ ಉಂಟಾಗುವ ವೇತನದ ಹೊರೆ ಭರಿಸುವ ತಲೆಬಿಸಿಯು ಎದುರಾಗಲಿದೆ. ಕೋವಿಡ್‌ನಿಂದ ನೇಮಕಾತಿ ವಿಳಂಬಕ್ಕೆ ಕಾರಣ ವಯೋಮಿತಿ ಮೀರಿರುವ ಕಾರಣ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯನ್ನ ಸಡಿಲಿಕೆ ಮಾಡಿದರೂ ನೇಮಕಾತಿ ವಿಚಾರದಲ್ಲಿನ ಸಮಸ್ಯೆಗಳು ಬಗೆಹರಿದಿಲ್ಲ.
ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ
ಹೋರಾಟ ನಡೆಸಿದವರಿಗೆ ಶಾಕ್ ?
ಪೊಲೀಸರ ಅನುಮತಿ ನಿರಾಕರಣೆಯ ನಡುವೆಯೂ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಹಿನ್ನೆಲೆ ಸಂಘಟನೆಯ ಮುಖಂಡರ ಮೇಲೆ ಕೇಸು ದಾಖಲಾಗುವ ಸಾಧ್ಯತೆ ಇದೆ. ಪ್ರತಿಭಟನೆ ಹಿನ್ನೆಲೆ ಧಾರವಾಡದ ಜುಬಿಲಿ ವೃತ್ತದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಸಾರ್ವಜನಿಕರಿಗೆ ತೊಂದರೆಯಾಗಿದೆ. ಜೊತೆಗೆ ಪ್ರತಿಭಟನಾ ಮೆರವಣಿಗೆ ವೇಳೆ ಕೆಲವು ಅಹಿತಕರ ಘಟನೆಗಳು ನಡೆದಿವೆ. ಕೆಲ ಯುವಕರು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದ್ದು, ಹೀಗಾಗಿ ಸಂಘಟನೆ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.