ಪತ್ರಕರ್ತೆಯರಿಗೆ ಶುಭಸುದ್ದಿ; ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ

ಪತ್ರಕರ್ತೆಯರಿಗೆ ಶುಭಸುದ್ದಿ; ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ


ರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮಾರ್ಚ್ 04: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಪತ್ರಕರ್ತರಿಗಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇನ್ಫೋಸಿಸ್ (ಇನ್ಫೋಸಿಸ್) ಸಿ.ಎಸ್.ಆರ್ ಕಾರ್ಯಕ್ರಮದಡಿ ಈ ತರಬೇತಿ ನಡೆಯಲಿದ್ದು, ಅರ್ಹ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಚ್ 25 ರಿಂದ 27 ರವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮೂರು ದಿನಗಳ ವಸತಿಯುತ ತರಬೇತಿ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕನಿಷ್ಠ ಐದು ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಗೂಗಲ್ ಫಾರ್ಮ್ https://forms.gle/tozr4GxUQibDHBvk9 ಮೂಲಕ ಅಗತ್ಯ ಮಾಹಿತಿಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಾಗಿದೆ. ಅರ್ಜಿ ಸಲ್ಲಿಸುವ ವೇಳೆ ಭಾವಚಿತ್ರ, ವಯಸ್ಸಿನ ಪ್ರಮಾಣಪತ್ರ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪತ್ರ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಅಥವಾ ಅಧಿಕೃತ ಗುರುತಿನ ಚೀಟಿ, ಸಂಬಂಧಿತ ಮಾಧ್ಯಮ ಸಂಸ್ಥೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾನ್ಯತೆ ಸೇರಿರುವ ದಾಖಲೆ ಹಾಗೂ ಕನಿಷ್ಠ ಐದು ವರ್ಷದ ಸೇವಾನುಭವದ ದಾಖಲೆಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ ಕೆಎಎಸ್ ಗ್ರೂಪ್ ಎ,ಬಿ ಪರೀಕ್ಷೆ ರಿಸಲ್ಟ್ ವಿರುದ್ಧ ವಿದ್ಯಾರ್ಥಿಗಳ ಅಪಸ್ವರ: ತನಿಖೆಗೆ ಒತ್ತಾಯ

ಮೂರು ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ ಬಳಕೆ, ಕೃತಕ ಬುದ್ಧಿಮತ್ತೆ (ಎಐ) ಉಪಯೋಗ, ಸಾಫ್ಟ್ ಸ್ಕಿಲ್ ಅಭಿವೃದ್ಧಿ ಹಾಗೂ ನಾಯಕತ್ವ ತರಬೇತಿ ನೀಡಲಾಗುತ್ತದೆ. ಭಾಗವಹಿಸುವ ಪತ್ರಕರ್ತರಿಗೆ ನಿಯಮಾನುಸಾರ ಭತ್ಯೆಯೂ ನೀಡಲಾಗುವುದು. ಪತ್ರಕರ್ತೆಯರ ಆಯ್ಕೆ ಕುರಿತ ಅಂತಿಮ ನಿರ್ಧಾರ ಕರ್ನಾಟಕ ಮಾಧ್ಯಮ ಅಕಾಡೆಮಿಯದ್ದೇ ಆಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ. ಆಸಕ್ತ ಪತ್ರಕರ್ತೆಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *