ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ!
ಗದಗ, ಡಿಸೆಂಬರ್ 20: ಇತ್ತೀಚಿಗೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಕರೆಗಳು, ಇ-ಮೇಲ್‌ಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಕರ್ನಾಟಕದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಗೆ (ಎಚ್.ಕೆ. ಪಾಟೀಲ್) ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಆರೋಪಿಯನ್ನು ಬಂಧಿಸಲಾಗಿದೆ.
ಸಚಿವರಿಗೆ ಅವಹೇಳನಕಾರಿ ಪದಗಳಿಂದ ನಿಂದನೆ
ಕೆಲವು ದಿನಗಳ ಹಿಂದೆಯಷ್ಟೇ ಮಂಗಳೂರು, ಗದಗ ಸೇರಿದಂತೆ ಹಲವೆಡೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್‌ಗಳು ಬಂದಿದ್ದವು. ಈ ನಡುವೆ ಕಾನೂನು ಸಚಿವ ಎಚ್.ಕೆ. ಪಾಟೀಲ್‌ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಿದ್ದು, ಎಲ್ಲೆಡೆ ಸಂಚಲನ ಮೂಡಿಸಿದೆ. ವೀರಣ್ಣ ಬೀಳಗಿ ಎಂಬಾತ ಪ್ರಚೋದನಕಾರಿ ಪೋಸ್ಟ್ ಹಾಕಿದ್ದು, ಸಚಿವರನ್ನು ಅವಹೇಳನಕಾರಿ ಪದಗಳಿಂದ ಜೊತೆಗೆ ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು ಎಂದಿದ್ದ.
ಸಾರ್ವಜನಿಕ ಸ್ಥಳದಲ್ಲಿ ಹಾನಿ ಮಾಡುವ ಬೆದರಿಕೆ ಹಾಕಿದ್ದಾನೆ. ಈ ವಿಚಾರ ಬೆಳಕಿಗೆ ಬಂದ ತಕ್ಷಣ ಕಾಂಗ್ರೆಸ್ ಮುಖಂಡ ಬಿ.ಬಿ. ಅಸೂಟಿ ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿ, ಡಿಸೆಂಬರ್ 14 ರಂದು ರೋಣ ತಾಲೂಕಿನ ಸೂಡಿ ಗ್ರಾಮದ ನಿವಾಸಿ ವೀರಣ್ಣ ಬೀಳಗಿಯನ್ನು ಬಂಧಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆ ಹಾಕುವವರ ವಿರುದ್ಧ ಕ್ರಮ
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹಾಗೂ ಬೆದರಿಕೆಯನ್ನು ಉಂಟುಮಾಡುವ ಪೋಸ್ಟ್‌ಗಳಿಗೆ ಕಾನೂನು ಕ್ರಮ ಅನಿವಾರ್ಯವೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇಂತಹ ಪೋಸ್ಟ್‌ಗಳು ಸಾರ್ವಜನಿಕ ಶಾಂತಿ ಮತ್ತು ಭದ್ರತೆಗೆ ಧಕ್ಕೆಯಾಗುತ್ತವೆ ಎಂದು ತಿಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರಿದಿದೆ ಎಂದು ಮಾಹಿತಿ ನೀಡಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.