ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್ ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ಕೊರತೆ ಎಂದು ಸೂಚಿಸಿದ್ದಾರೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ. ಹೀಗಾಗಿ ಮತ್ತೆ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಕಿತ್ತಾಟ ಮುನ್ನೆಲೆಗೆ ಬಂದಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳುತ್ತದೆ.