Headlines

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾಗಲಿದೆ ಮಳೆಯ ಅಬ್ಬರ, ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾಗಲಿದೆ ಮಳೆಯ ಅಬ್ಬರ, ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ


ಬೆಂಗಳೂರು, ಸೆಪ್ಟೆಂಬರ್ 05: ಕರ್ನಾಟಕದಾದ್ಯಂತ ಇಂದಿನಿಂದ (ಮಳೆ) ಅಬ್ಬರ ಕಡಿಮೆಯಾಗಲಿದೆ, ಆದರೂ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಲಿದೆ.

ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಆಗುಂಬೆ, ಉಪ್ಪಿನಂಗಡಿ, ಸುಳ್ಯ, ಕಮ್ಮರಡಿ, ಗೋಪಾಲನಗರ, ಭಾಗಮಂಡಲ, ಪುತ್ತೂರು, ಮಂಗಳೂರು, ಗೇರುಸೊಪ್ಪ, ಉಡುಪಿ, ಟಿಜಿ ಹಳ್ಳಿ, ಶೃಂಗೇರಿ, ಸಿದ್ದಾಪುರ, ಮಾಣಿ, ಮಾಗಡಿ, ಕುಣಿಗಲ್, ಕಳಸ, ಧರ್ಮಸ್ಥಳ, ಕ್ಯಾಸಲ್ರಾಕ್, ಬೆಂಗಳೂರು ನಗರ, ಬೆಳ್ತಂಗಡಿ, ತ್ಯಾಗರ್ತಿ, ಸೋಮವಾರಪೇಟೆ, ಶಕ್ತಿನಗರ, ಪೊನ್ನಂಪೇಟೆ, ನಾಪೋಕ್ಲು, ಮೂಡುಬಿದಿರೆ, ಮಂಗಳೂರು, ಕುಮಟಾ, ಕೊಟ್ಟಿಗೆಹಾರ, ಕೊಪ್ಪ, ಕಾರ್ಕಳ, ಜಯಪುರ, ಗೋಕರ್ಣ, ಬಂಟವಾಳ, ವಿಜಯಪುರ, ಮುಲ್ಕಿ, ಕೆಂಭಾವಿ, ಕಾರವಾರ, ಕದ್ರಾ, ಕೋಣನೂರು, ಹೊನ್ನಾವರ, ಹಳಿಯಾಳ, ಇಂಡಿ, ಹೊನ್ನಾವರ, ಬಾಳೆಹೊನ್ನೂರು, ಅರಕಲಗೂಡು, ಚಿಕ್ಕಬಳ್ಳಾಪುರ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು: ಕರ್ನಾಟಕ ಮಳೆ: ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಜೋರು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್​​ಎಎಲ್​​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್​​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಹಾವೇರಿಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *