Headlines

Karnataka Rains:ಕರ್ನಾಟಕದ ಉತ್ತರ ಒಳನಾಡಿನಲ್ಲಿ ಒಣಹವೆ, ಈ ಜಿಲ್ಲೆಗಳಲ್ಲಿ ಮಳೆ

Karnataka Rains:ಕರ್ನಾಟಕದ ಉತ್ತರ ಒಳನಾಡಿನಲ್ಲಿ ಒಣಹವೆ, ಈ ಜಿಲ್ಲೆಗಳಲ್ಲಿ ಮಳೆ


ಬೆಂಗಳೂರು, ಸೆಪ್ಟೆಂಬರ್ 07: ಕರ್ನಾಟಕದ ಬಹುತೇಕ ಕಡೆ (ಮಳೆ) ಪ್ರಮಾಣ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ ಮುಂದುವರೆಯಲಿದೆ.

ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಶನಿವಾರ ಬೆಂಗಳೂರು, ಭಾಗಮಂಡಲ, ಸುಳ್ಯ, ಉಡುಪಿ, ಆಗುಂಬೆ, ಕಾರವಾರ, ಹೊನ್ನಾವರ, ಕೋಟಾ, ಪುತ್ತೂರು, ಶೃಂಗೇರಿ, ಶಿವಮೊಗ್ಗ, ಪೊನ್ನಂಪೇಟೆ, ಪುತ್ತೂರು, ಮಾಣಿ, ಕೊಟ್ಟಿಗೆಹಾರ, ಕಾರ್ಕಳ, ಕೊಪ್ಪ, ಕಳಸ, ಜಯಪುರ, ಗೇರುಸೊಪ್ಪ, ಧರ್ಮಸ್ಥಳ,ಬೆಳ್ತಂಗಡಿಯಲ್ಲಿ ಮಳೆಯಾಗಿದೆ.

ಎಚ್​​ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು:

ಕರ್ನಾಟಕ ಮಳೆ: ಕರ್ನಾಟಕದಾದ್ಯಂತ ಕಡಿಮೆಯಾಗಲಿದೆ ಅಬ್ಬರ, ಈ ಸಾಧಾರಣ ಸಾಧಾರಣ ಮಳೆ

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.4 ಡಿಗ್ರಿ ಸೆಲ್ಸಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *