
ಬೆಂಗಳೂರು, ಮಾರ್ಚ್ 26: ಕರ್ನಾಟಕದಾದ್ಯಂತ ಮಾರ್ಚ್ 18 ರಿಂದ ಎಸ್ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದೆ. ಕೆಲವು ಪರೀಕ್ಷೆಗಳು ನಡೆದಿವೆ. ಆದರೆ ಮಾ.30ರಂದು ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಇದೀಗ ಮುಂದೂಡಲಾಗಿದೆ. ಮಾ.30ರಂದು ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷೆ ಸ್ಥಗಿತಗೊಂಡಿದೆ, ಮಾ. 31 ರಂದು ಪರೀಕ್ಷೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.