SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್


SSLC ಒಟ್ಟು ಮಾರ್ಕ್ಸ್ 625 ರಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

ಬೆಂಗಳೂರು, ಮಾರ್ಚ್ 27: ಎಸ್ಸೆಸ್ಸೆಲ್ಸಿ ಪರೀಕ್ಷೆ (SSLC ಪರೀಕ್ಷೆ) ಹಿಂದಿ ಭಾಷೆ ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ಇತ್ತೀಚೆಗೆ ವಿವಿಧ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದವು. ಇದರ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 525 ಅಂಕಗಳನ್ನು ನಿಗದಿಪಡಿಸಲಾಗಿದೆ. ತೃತೀಯ ಭಾಷೆಯ ಅಂಕಕ್ಕೆ ಕೊಕ್ ಕೊಡುಗೆ. ಆ ಮೂಲಕ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಶಿಕ್ಷಣ ಇಲಾಖೆ ಮಹತ್ವದ ಸುದ್ದಿ ನೀಡಿದೆ.

625 ರಿಂದ 525 ಅಂಕಕ್ಕೆ ಇಳಿಕೆ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸಲಾಗಿದೆ. ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ಗುರಿಪಡಿಸಲಾಗಿದೆ. ಇದರ ಒಟ್ಟು ಅಂಕಗಳು 625 ರಿಂದ 525 ಇಳಿಕೆಯಾಗಿದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಕೆಆರ್. ವೃತ್ತದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧುಪ್ಪ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ನಿಯಮವು ಹೊಸ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಉಳಿದ ತರಗತಿಗಳ ಕುರಿತು ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆ ತೀರ್ಮಾನಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ ಎಸ್.ಎಸ್.ಎಲ್.ಸಿ

SSLC ಪರೀಕ್ಷೆ ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಆದರೆ, ಇನ್ನು ಮುಂದೆ ಹಿಂದಿ ವಿಷಯದ 100 ಅಂಕಗಳನ್ನು ಫಲಿತಾಂಶದಲ್ಲಿ ಹೊರಗಿಟ್ಟಿದೆ, ಇವುಗಳನ್ನು ಪರೀಕ್ಷೆ ಅಂಕಗಳಲ್ಲಿ ಒಳಪಡಿಸಲಾಗಿಲ್ಲ. ವಿದ್ಯಾರ್ಥಿಗಳ ಫಲಿತಾಂಶವು ಕೇವಲ 525 ಅಂಕಗಳ ಮೇಲೆ ಮಾತ್ರ ಪರಿಗಣಿಸಲ್ಪಡುತ್ತದೆ. ಈ ಬದಲಾವಣೆಗಳಿಂದ ಒತ್ತಡವನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ.

ಹಿಂದಿ ಪರೀಕ್ಷೆಗೆ

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18 ರಿಂದ ಆರಂಭವಾಗಿದೆ. ಮಾ.30ರಂದು ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಮಹಾವೀರ ಜಯಂತಿ ಹಿನ್ನೆಲೆ ಮಾ. 31ಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ. ಈಗ ಇದೆಲ್ಲದರ ಮಧ್ಯೆ ಇದೀಗ ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 525 ಅಂಕಗಳನ್ನು ನಿಗದಿಪಡಿಸಲಾಗಿದೆ. ಆ ಮೂಲಕ ತೃತೀಯ ಭಾಷೆಯ ಅಂಕವನ್ನು ಕೈಬಿಡಲಾಗಿದೆ.

ಹೆಚ್ಚಿನ ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *