ಬೆಂಗಳೂರು, ಡಿಸೆಂಬರ್ 09: ಕಬ್ಬಿಗೆ ಸರ್ಕಾರದ ದರ ನಿಗದಿ ಪ್ರಶ್ನಿಸಿ ವಿವಿಧ ಸಕ್ಕರೆ ಕಾರ್ಖಾನೆಗಳಿಂದ ಅಧಿಕಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸುತ್ತಿರುವ ಏಕಸದಸ್ಯ ಪೀಠ, ಈ ಹಂತದಲ್ಲಿ ಮಧ್ಯಂತರ ತಡೆಯಾಜ್ಞೆ ಸಾಧ್ಯವಿಲ್ಲವೆಂದು. ಜೊತೆಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು 17ಕ್ಕೆ ನಿಗದಿಪಡಿಸಲಾಗಿದೆ.
ರಾಜ್ಯ ಸರ್ಕಾರ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ 3250 ರೂ. ದರ ನಿಗದಿ ಮಾಡಿದೆ. ಕಟಾವು, ಸಾಗಾಣಿಕೆ ಸೇರಿದರೆ ಕಾರ್ಖಾನೆಗಳಿಗೆ 4,150 ರೂ. ವೆಚ್ಚವಾಗಲಿದ್ದು, ಕಾನೂನು ಪಾಲಿಸದೇ ರಾಜ್ಯ ಸರ್ಕಾರ ಏಕಪಕ್ಷೀಯ ಆದೇಶ ನೀಡಿದೆ. ಹೀಗಾಗಿ ಸಕ್ಕರೆ ಕಾರ್ಖಾನೆಗಳಿಗೆ ಭರಿಸಲಾಗದ ನಷ್ಟ ಉಂಟಾಗಿದೆ ಎಂದು ಹಲವು ಸಕ್ಕರೆ ಕಾರ್ಖಾನೆಗಳು ಆರೋಪಿಸಿದೆ. ರೇಣುಕಾ ಶುಗರ್ಸ್, ನಿರಾಣಿ ಶುಗರ್ಸ್, ಜೆಮ್ ಶುಗರ್ಸ್, ಕೆಪಿಆರ್ ಶುಗರ್ಸ್, ಗೋದಾವರಿ ಬಯೋ ರಿಪೈನರೀಸ್ ಈ ಬಗ್ಗೆ ಅರ್ಜಿ ಸಲ್ಲಿಸಲಾಗಿದೆ. ಸೌತ್ ಇಂಡಿಯಾ ಶುಗರ್ ಮಿಲ್ಸ್ ಅಸೋಸಿಯೇಷನ್ ಪರ ಹಿರಿಯ ವಕೀಲ ಹೆಚ್.ಎನ್. ಶಶಿಧರ್ ವಾದ ಮಂಡಿಸಿದ್ದರು. ಈ ವೇಳೆ ರೈತರು ನೀವ್ಯಾರೂ ಇಲ್ಲ ಎಂದರೆ ಅರ್ಥ ಮಾಡಿಕೊಳ್ಳಬೇಕು. ಎಥೆನಾಲ್ ಸೇರಿ ಎಲ್ಲದರಲ್ಲೂ ಸಂಪಾದಿಸಿದರೂ ರೈತರಿಗೆ ಕೊಡಲು ಬಯಸುವುದಿಲ್ಲ ಎಂದು ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಕೊನೆಗೂ ಫಲ, ಪ್ರತಿ ಟನ್ ಕಬ್ಬಿಗೆ 3,300 ರೂ ನಿಗದಿ
ಕಬ್ಬಿಗೆ ಬೆಲೆ ನಿಗದಿಗೆ ರಾಜ್ಯದ ವಿವಿಧೆಡೆ ರೈತರು ಬೀದಿಗಿಳಿದಿದ್ದರು. ಅನ್ನದಾತರ ಹೋರಾಟ ತೀವ್ರವಾಗಿ ಮಧ್ಯಪ್ರವೇಶಿಸಿದ ರಾಜ್ಯ ಸರ್ಕಾರ ಈ ಬಗ್ಗೆ ಮಹತ್ವದ ಸಭೆ ನಡೆಸಿತ್ತು. ಟನ್ ಕಬ್ಬಿಗೆ 3,500 ರೂ. ಬೆಲೆ ಕೊಡಬೇಕೆಂಬ ರೈತರ ಪಟ್ಟಿನ ಬೆಂಬಲ, ಪ್ರತಿ ಟನ್ ಕಬ್ಬಿಗೆ 3,300 ರೂ. ದರವನ್ನು ಸರ್ಕಾರ ನಿಗದಿಪಡಿಸಿತ್ತು. ಸಭೆ ಬಳಿಕ ಮಾತನಾಡಿದ ಸಿಎಂ, ಪ್ರತಿ ಟನ್ ಕಬ್ಬಿಗೆ 3,200 ರೂ. ದರ ನಿಗದಿ ಮಾಡು, ಜೊತೆಗೆ 100 ರೂ. ಸೇರಿಸುತ್ತೇವೆ. ಅಂದರೆ ಸರ್ಕಾರದಿಂದ 50 ರೂ., ಕಾರ್ಖಾನೆಯಿಂದ 50 ರೂ. ನೀಡಲಾಗುತ್ತೆ ಎಂದಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 2:15 pm, ಮಂಗಳವಾರ, 9 ಡಿಸೆಂಬರ್ 25