Bangalore Rain: ಸಂಜೆಯಾಗುತ್ತಿದ್ದಂತೆ ಬೆಂಗಳೂರಿಗೆ ಎಂಟ್ರಿಕೊಟ್ಟ ಮಳೆ: ಆಲಿಕಲ್ಲು ಮಳೆ ಕಂಡು ಸಿಟಿ ಮಂದಿ ಖುಷ್

Bangalore Rain: ಸಂಜೆಯಾಗುತ್ತಿದ್ದಂತೆ ಬೆಂಗಳೂರಿಗೆ ಎಂಟ್ರಿಕೊಟ್ಟ ಮಳೆ: ಆಲಿಕಲ್ಲು ಮಳೆ ಕಂಡು ಸಿಟಿ ಮಂದಿ ಖುಷ್


ಬೆಂಗಳೂರು ಮಳೆ: ಸಂಜೆಯಾಗುತ್ತಿದ್ದಂತೆ ಬೆಂಗಳೂರಿಗೆ ಎಂಟ್ರಿಕೊಟ್ಟ ಮಳೆ: ಆಲಿಕಲ್ಲು ಮಳೆ ಕಂಡು ಸಿಟಿ ಮಂದಿ ಖುಷ್

ಬೆಂಗಳೂರು, ಮಾರ್ಚ್ 18: ಕರ್ನಾಟಕದಲ್ಲಿ ಮಳೆ (ಮಳೆ) ಆರ್ಭಟ ಶುರುವಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ, ಇಂದು ಕೂಡ ಮಳೆ ಸುರಿದಿದೆ. ಇತ್ತ ಬೆಂಗಳೂರಿನಲ್ಲಿ ಇಂದು ಕವಿದ ವಾತಾವರಣವಿದ್ದು, ಸಂಜೆಯಾಗುತ್ತಿದ್ದಂತೆಯೇ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಆ ಮೂಲಕ ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ. ಆಲಿಕಲ್ಲಿನ ಮಳೆ ಕಂಡು ಸಿಟಿ ಮಂದಿ ಫುಲ್ ಖುಷ್

ಎಲೆಲ್ಲಿ ಮಳೆ

ರಣ ರಣ ಬಿಸಿಲಿನ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮೆಜೆಸ್ಟಿಕ್, ಶಾಂತಿನಗರ, ಕಾಡುಗೋಡಿ, ಮಾರುಕಟ್ಟೆ, ಜಯನಗರ, ಬಸವೇಶ್ವರ ನಗರ, ಶಾಂತಿನಗರ, ವಿಲ್ಸನ್‌ಗಾರ್ಡನ್, ರಿಚ್ಮಂಡ್‌ಟೌನ್ ಸುತ್ತಮುತ್ತ ಮಳೆಯಾಗಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ; ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಸ್ಥಿತಿ ಏನು?

ದಾವಣಗೆರೆ ಜಿಲ್ಲೆಯಲ್ಲಿ ಇಂದು ಮತ್ತೆ ಮಳೆಯಾಗಿದೆ. ದಾವಣಗೆರೆ ತಾಲೂಕಿನ ಗುಮ್ಮನೂರ, ಗುಡಾಳ್, ಹೆಬ್ಬಾಳ್, ಆನಗೋಡು ಸೇರಿದಂತೆ ಕಡೆ ಮಳೆಯಾಗಿದೆ. ಗ್ರಾಮದ ರಸ್ತೆ ತುಂಬೆಲ್ಲಾ ರಾಶಿ ಅಲಿಕಲ್ಲು ಬಿದ್ದಿದ್ದು, ರಸ್ತೆಯ ಕಾಶ್ಮೀರ ಮನೆ.

ಚಾಮರಾಜನಗರದಲ್ಲಿ ಭಾರೀ ಬಿರುಗಾಳಿ ಸಮೇತ ವರುಣನ ರುದ್ರನರ್ತನ

ಚಾಮರಾಜನಗರ ಪಟ್ಟಣ ಹಾಗೂ ಚಾಮರಾಜನಗರ ತಾಲೂಕಿನಾದ್ಯಂತ ಭಾರೀ ಬಿರುಗಾಳಿ ಸಮೇತ ವರುಣ ಆರ್ಭಟಿಸಿದ್ದಾನೆ. ಮಳೆಯ ಆರ್ಭಟಕ್ಕೆ ರಸ್ತೆ ಕಾಣದೆ ವಾಹನ ಸವಾರರು ಪರದಾಡಿದ್ದಾರೆ. ಬಿರುಗಾಳಿಯ ರಭಸಕ್ಕೆ ತೆಂಗಿನ ಗರಿಗಳು ದರಶಾಹಿ ಆಗಿದೆ. ನಿನ್ನೆ ಆಲಿಕಲ್ಲು ಸಮೇತ ಮಳೆ ಸುರಿದು ರೈತರಿಗೆ ಸಂಕಷ್ಟ ತಂದೊಡ್ಡಿತ್ತು. ಇಂದು ಮತ್ತೆ ರಣ ಚಂಡಿ ಮಳೆ ಸುರಿದಿದೆ. ಈ ಅಕಾಲಿಕ ಮಳೆಗೆ ಚಾಮರಾಜನಗರ ಜನತೆ ಮತ್ತು ರೈತರು ತಬ್ಬಿಬ್ಬಾಗಿದ್ದಾರೆ.

ಇದನ್ನೂ ಓದಿ: ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!

ಇನ್ನು ದಕ್ಷಿಣಕನ್ನಡ ಜಿಲ್ಲೆಯ ಕಡಬದಾದ್ಯಂತ ಮಳೆ ಸುರಿದಿದೆ. ಕೊಂಬಾರು ಗ್ರಾಮದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಆ ಮೂಲಕ ಬಿಸಿಲ ಧಗೆಗೆ ಮಳೆರಾಯ ತಂಪೆರೆದಿದ್ದಾನೆ. ಸಾಂಸ್ಕೃತಿಕ ನಗರದಲ್ಲಿ ಸುಮಾರು ಒಂದು ಗಂಟೆ ನಿರಂತರ ಮಳೆಯಾಗಿದೆ. ವರ್ಷದ ಮೊದಲ ಮಳೆಗೆ ಮೈಸೂರಿಗರ ಸಂತಸಗೊಂಡಿದ್ದಾರೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದವರಿಗೆ ವರುಣ ಸಿಂಚನವಾಗಿದೆ.

ವರದಿ: ನಟರಾಜ್ ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *