
ಬೆಂಗಳೂರು, ಏಪ್ರಿಲ್ 06: 38 ತಿಂಗಳ ವೇತನ ಹಿಂಬಾಕಿ ’ಮತ್ತು ಹೊಸ ವೇತನ (ಸಂಬಳ ಬಾಕಿ) ಪರಿಷ್ಕರಣೆಗಾಗಿ ಆಯ್ಕೆಗಾಗಿ ಸಾರಿಗೆ ನೌಕರರ ಹೋರಾಟಕ್ಕೆ ಮುಂದಾಗಿದ್ದರು. ಆದರೆ ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್ ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ ಒಪ್ಪದ ಸಾರಿಗೆ ನೌಕರರ ಕೂಟ ಮತ್ತೆ ಹೋರಾಟಕ್ಕೆ ಮುಂದಾಗಿದೆ.
ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೆ ಪಾದಯಾತ್ರೆ
ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ 38 ವೇತನ ಹಿಂಬಾಕಿ 2024 ಆಗಬೇಕಿದ್ದ, ಹೊಸ ವೇತನ ಒಪ್ಪಂದಕ್ಕಾಗಿ ಹೋರಾಟಕ್ಕೆ ಮುಂದಾಗಿದ್ದರು. ಆದರೆ ರಾಜ್ಯ ಸರ್ಕಾರ 38 ತಿಂಗಳ ವೇತನ ಹಿಂಬಾಕಿ ಬದಲಿಗೆ 26 ತಿಂಗಳ ವೇತನ ಹಿಂಬಾಕಿ, 2024 ಜನವರಿ ಬದಲಿಗೆ 2025ರ ಏಪ್ರಿಲ್ ನಿಂದ ಹೊಸ ವೇತನ ಒಪ್ಪಂದವನ್ನು ಮಾಡುವಂತೆ ಆದೇಶ ಹೊರಡಿಸಲಾಗಿದೆ. ಆದರೆ ಇದಕ್ಕೆ ಒಪ್ಪದ ಸಾರಿಗೆ ನೌಕರರ ಒಕ್ಕೂಟ ಇಂದು ಸುದ್ದಿಗೋಷ್ಠಿ ನಡೆಸಿ ಯಾವುದೇ ಕಾರಣಕ್ಕೂ ಸರ್ಕಾರದ ಆದೇಶವನ್ನು ನಾವು ಒಪ್ಪುವುದಿಲ್ಲ. ಏಪ್ರಿಲ್ 8 ರಿಂದ ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೆ ಪಾದಯಾತ್ರೆ ನಡೆಯಲಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ.
ಇದನ್ನೂ ಓದಿ: ವೇತನ ಹಿಂಬಾಕಿಗೆ ಡಿಮ್ಯಾಂಡ್: ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ
ಇನ್ನು ಸಾರಿಗೆ ನೌಕರರ ಒಕ್ಕೂಟ 38 ತಿಂಗಳ ವೇತನ ಹಿಂಬಾಕಿ ಮತ್ತು 2024 ಜನವರಿಯಿಂದಲೇ ವೇತನ ಹೆಚ್ಚಳ ಪಟ್ಟು ಹಿಡಿದಿದ್ದಾರೆ. ರಾಜ್ಯ ಸರ್ಕಾರ 38 ತಿಂಗಳ ವೇತನ ಹಿಂಬಾಕಿಯಲ್ಲಿ 26 ತಿಂಗಳ ವೇತನ ಹಿಂಬಾಕಿ 1272 ಕೋಟಿ ರೂ ನೀಡುತ್ತಿದೆ. 2024 ಜನವರಿಯಿಂದ ಆಗಬೇಕಿದ್ದ ಹೊಸ ವೇತನ ಒಪ್ಪಂದವನ್ನು 2025 ಏಪ್ರಿಲ್ ನಿಂದ ಮಾಡಲು ಮುಂದಾಗಿದೆ.
1970 ಕೋಟಿ ರೂ ಹಿಂಬಾಕಿ ಬಿಡುಗಡೆಗೆ ಪಟ್ಟು
ಸರ್ಕಾರದ ಈ ನಿರ್ಧಾರಕ್ಕೆ ಒಪ್ಪಿದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರು 38 ತಿಂಗಳ ವೇತನ ಹಿಂಬಾಕಿ 1970 ಕೋಟಿ ರೂ ಬಿಡುಗಡೆ ಮಾಡಬೇಕು ಮತ್ತು 2024 ಜನವರಿಯಿಂದ ಹೊಸ ವೇತನ ಒಪ್ಪಂದವನ್ನು ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಹೊಸ ಫ್ರೀಡಂ ಪಾರ್ಕ್‌ಗೆ, ಅಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ನಂತರ ಮುಷ್ಕರಕ್ಕೆ ಹೋಗಲು ಸಾರಿಗೆ ನೌಕರರು ಸಿದ್ಧತೆ ಮಾಡಿಕೊಂಡಿದ್ದಾರೆ. ಅಂದು ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದೂಡುವುದು ಉತ್ತಮ.
ಇದನ್ನೂ ಓದಿ: ವಿವಿಧ ಬೇಡಿಕೆಗಳಿಗೆ ನಾಳೆ ಕರ್ನಾಟಕ ಸಾರಿಗೆ ನೌಕರರ ಹೋರಾಟ: ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ?
ಒಟ್ಟಿನಲ್ಲಿ ಸರ್ಕಾರ ರಾಜ್ಯ ನೀಡಬೇಕಾಗಿತ್ತು 38 ತಿಂಗಳ ಬದಲಿಗೆ 26 ತಿಂಗಳ ವೇತನ ಮತ್ತು 2024 ಜನವರಿ ಬದಲಿಗೆ 25 ಏಪ್ರಿಲ್ ನಿಂದ ಹೊಸ ವೇತನ ಪರಿಷ್ಕರಣೆ ಇರುತ್ತದೆ. ಆದರೆ ಇದಕ್ಕೆ ಸಾರಿಗೆ ನೌಕರರು ಒಪ್ಪದೆ ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.