Headlines

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ! ಬಾಗಲಕೋಟೆಗೆ ಆರೆಂಜ್ ಅಲರ್ಟ್​

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ! ಬಾಗಲಕೋಟೆಗೆ ಆರೆಂಜ್ ಅಲರ್ಟ್​


ಬೆಂಗಳೂರು, ಡಿಸೆಂಬರ್ 15: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮೈಕೊರೆಯುವ ಚಳಿ (ಹವಾಮಾನ ಮುನ್ಸೂಚನೆ) ಜನರನ್ನು ಕಂಗಾಲಾಗಿಸಿದೆ. ಕಳೆದ ಎರಡು ದಿನಗಳಿಂದ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಹೆಚ್‌ಎಎಲ್‌ಗೆ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದೆ, ಬಾಗಲಕೋಟೆಗೆ ಎಚ್ಚರಿಕೆ ನೀಡಲಾಗಿದೆ. ಗದಗ, ಚಿಕ್ಕಮಗಳೂರು ಹಾಗೂ ಮೈಸೂರಿಗೆ ಎಲ್ಲೋ ಎಚ್ಚರಿಕೆ ನೀಡಲಾಗಿದೆ.

ಲಾಲ್‌ಬಾಗ್‌ಗೆ ವಾಕಿಂಗ್ ಬರುವವರ ಸಂಖ್ಯೆ ಶೇ.50 ಕುಸಿತ

ಬೆಂಗಳೂರಿನಲ್ಲಿ ಚಳಿಯ ಆರ್ಭಟ ಮುಂದುವರಿದಿದ್ದು, ತಾಪಮಾನ 14 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಬೆಳಗಿನ ವಾಕಿಂಗ್‌ಗೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದಾರೆ, ಲಾಲ್‌ಬಾಗ್‌ನಂತಹ ಉದ್ಯಾನವನಗಳಲ್ಲಿ ವಾಯುವಿಹಾರಕ್ಕೆ ಬರುವವರ ಸಂಖ್ಯೆ ಶೇ.50ರಷ್ಟು ಕಡಿಮೆಯಾಗಿದೆ. ಡಿಸೆಂಬರ್ 17 ರಿಂದ ಚಳಿ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ವೈದ್ಯರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದು, ವಿಶೇಷವಾಗಿ ಮಕ್ಕಳು ಮತ್ತು ಹಿರಿಯರಿಗೆ ಸೂಚನೆ ನೀಡಲಾಗಿದೆ. ಬೆಳಗಿನ ವಾಕ್ ಮತ್ತು ವ್ಯಾಯಾಮವನ್ನು ತಾತ್ಕಾಲಿಕವಾಗಿ ತಪ್ಪಿಸಿ, ಬೆಚ್ಚನೆಯ ಉಡುಪು ಧರಿಸಿ ಬಿಸಿ ಆಹಾರ ಸೇವಿಸುವಂತೆ ಸೂಚಿಸಲಾಗಿದೆ.

ನಿನ್ನೆ ರಾಜ್ಯದಲ್ಲಿ ದಾಖಲಾದ ಕನಿಷ್ಠ ಉಷ್ಣಾಂಶ

ಬಿದರಿನಲ್ಲಿ ಕನಿಷ್ಠ 7.4°C ತಾಪಮಾನ ಕಂಡುಬಂದಿದೆ, ರಾಜ್ಯದಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಹೊನ್ನಾವರದಲ್ಲಿ ಕನಿಷ್ಠ 19.13°C, ಬೆಂಗಳೂರು ಎಚ್‌ಎಲ್‌ಇ ತಾಪಮಾನ 13.4°C, ಬೆಂಗಳೂರು ನಗರದಲ್ಲಿ 14.5°C, ಬೆಂಗಳೂರು KAIL AP – 12.9°C, ಹಾಸನದಲ್ಲಿ 8.7°C, ಆಗುಂಬೆಯಲ್ಲಿ 9.3°C, ಧಾರವಾಡದಲ್ಲಿ 9.5°C, ವಿಜಯಪುರದಲ್ಲಿ 10°C, 7°C, ಹಾಸನದಲ್ಲಿ ಕನಿಷ್ಠ 8.

ಇದನ್ನೂ ಓದಿ ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯ ಮುನ್ಸೂಚನೆ, 5 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆ

ಹೃದಯಘಾತಕ್ಕೂ ಚಳಿಗಾಲಕ್ಕೂ ಇದೆಯಾ ಸಂಬಂಧ?

ಮುಂದಿನ ನಾಲ್ಕು ದಿನಗಳ ಕಾಲ ಬೆಳಿಗ್ಗೆ 3 ರಿಂದ 8 ಗಂಟೆಗಳವರೆಗೆ ಹೆಚ್ಚಿನ ಚಳಿ ಇರಲಿದೆ, ಸಿಲಿಕಾನ್ ಸಿಟಿಯಲ್ಲಿ ತೀವ್ರ ಶೀತ ವಾತಾವರಣ ಇರುವ ಸಾಧ್ಯತೆಯಿದೆ. ಈ ಮಕ್ಕಳು ಹಾಗೂ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಚಳಿಗಾಲದಲ್ಲಿ ಬೆಳಗಿನ ವಾಕ್ ತಪ್ಪಿಸಿ, ಸಂಜೆ ವಾಕಿಂಗ್ ಉತ್ತಮ ಎಂದು ಜಯದೇವ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದ್ದಾರೆ. ಜೊತೆಗೆ ಬಜ್ಜಿ, ಬೋಂಡಾ ಮುಂತಾದ ಆಹಾರ ಸೇವನೆ ತಪ್ಪಿಸಿ, ಆರೋಗ್ಯಕರ ಜೀವನಶೈಲಿ ಅನುಸರಿಸುವಂತೆ ಸೂಚಿಸಲಾಗಿದೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *