
ಬೆಂಗಳೂರು, ಮಾ.26: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಮುಂದಿನ ಒಂದು ವಾರದಾದ್ಯಂತ ಮಿಶ್ರ ಹವಾಮಾನ ಇರಲಿದೆ, ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಹಗಲಿನ ವೇಳೆಯಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಲಿದೆ, ಒಣ ಹವೆ ಮುಂದುವರಿಯಲಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಲಿದೆ.
ಮಧ್ಯಾಹ್ನದ ನಂತರ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣ ಕಾರ್ಯಕ್ರಮ. ವರದಿಯ ಪ್ರಕಾರ, ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ (ಗುಡುಗು ಬಿರುಗಾಳಿಗಳು ಮತ್ತು ಗುಡುಗು ಗಾಳಿ) ಹಗುರವಾದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಿಡಿಲು ಮತ್ತು ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ಮರದ ಕೆಳಗೆ ನಿಲ್ಲದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ
ಇಲ್ಲಿದೆ ಎಕ್ಸ್ ಪೋಸ್ಟ್;
ಮುಂದಿನ 7 ದಿನಗಳು #ಹವಾಮಾನ #ಮುನ್ಸೂಚನೆ & #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಹಾಗೂ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ pic.twitter.com/2E0tFxVFZ7
— ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (@ಕರ್ನಾಟಕ ಎಸ್ಎನ್ಡಿಎಂಸಿ) ಮಾರ್ಚ್ 26, 2026
ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದೆ, ಸಂಜೆ ಅಥವಾ ರಾತ್ರಿ ವೇಳೆಗೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಚಾಮರಾಜನಗರದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮಲೆನಾಡು ಭಾಗಗಳಾದ ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ, ‘ಯೆಲ್ಲೋ ಅಲರ್ಟ್’ ಎಂದು ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಸೆಖೆ ಹೆಚ್ಚಿರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಈ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕಲಬುರಗಿ, ಬೀದರ್, ರಾಯಚೂರು, ವಿಜಯಪುರ ಬಿಸಿಲಿನ ತಾಪಮಾನ 40°C ದಾಟುವ ಸಾಧ್ಯತೆಯಿದೆ. ಮಳೆಯ ಮುನ್ಸೂಚನೆ ತೀರಾ ಕಡಿಮೆ ಇರುತ್ತದೆ, ಒಣ ಹವೆ ಮುಂದುವರಿಯಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ