
ಬೆಂಗಳೂರು, ಮಾರ್ಚ್ 31: ತೀವ್ರ ಬಿಸಿಲಿನ ವಾತಾವರಣದ ನಡುವೆಯೂ ನಾಳೆ (ಏಪ್ರಿಲ್ 1) ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಬಿಸಿಲು ಮತ್ತು ಮಳೆಯ ಮಿಶ್ರ ಹವಾಮಾನವಿದೆ. ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದರೆ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?
ದಕ್ಷಿಣ ಒಳನಾಡು ಭಾಗದ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಾಳಿಯ ವೇಗಕ್ಕೆ 30-40 ಕಿಲೋ ಮೀಟರ್ ಇರಬಹುದೆಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಗಳಿದ್ದರೂ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ವಿಜಯದ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ಹವಾಮಾನ ಇಲಾಖೆ ಅಂದಾಜಿಸಿದೆ. ಮುಂದಿನ ಕೆಲವರೆಗೂ ರಾಜ್ಯದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಆತಂಕಕಾರಿ ಮಟ್ಟದಲ್ಲಿ ಮೈಸೂರಿನ ಏರ್ ಕ್ವಾಲಿಟಿ!
ಬೆಂಗಳೂರಲ್ಲೂ ವರುಣನ ಅಬ್ಬರ
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮೋಡ ಕವಿದ ವಾತಾವರಣವಿರಲಿದೆ, ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಹಗುರವಾದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ಗರಿಷ್ಠ ತಾಪಮಾನ 34 ರಿಂದ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ರಿಂದ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.