ರಾಜ್ಯದೆಲ್ಲೆಡೆ ಹೆಚ್ಚಿದ ವರುಣಾರ್ಭಟ, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಎಚ್ಚರಿಕೆ
ಬೆಂಗಳೂರು, ಅಕ್ಟೋಬರ್ 27: ಕರ್ನಾಟಕದಲ್ಲಿ ವರುಣಾರ್ಭಟ (ಹವಾಮಾನ ಮುನ್ಸೂಚನೆ) ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ಎಚ್ಚರಿಕೆ ನೀಡಲಾಗಿದೆ. ಉಳಿದೆಲ್ಲ ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಲಿದೆ ಎಂದು ಹವಾಮಾನ ಇಲಾಖೆ.
ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡು ಪ್ರದೇಶಗಳಾದ ಹಾವೇರಿ, ಧಾರವಾಡ, 30-40 ಕೀಮಿ ಗಾಳಿಯ ವೇಗದೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ನಿರೀಕ್ಷಿಸುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ 30-40 ಕಿಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಿರಲಿದೆ.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಸಹ ಗುಡುಗು ಸಹಿತ ಭಾರಿ ಮಳೆಯಾಗಿದೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ, ಬೆಂಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಬಳ್ಳಾರಿ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ.
ಬೆಂಗಳೂರಿನಲ್ಲಿಯೂ ಮಳೆ
ಬೆಂಗಳೂರಿನಲ್ಲಿ ಇಂದು ಶೇ. 55ರಷ್ಟು ಮಳೆಯಾಗುವ ಸಾಧ್ಯತೆಯಿದೆ, ಮೋಡದ ವಾತಾವರಣವಿರಲಿದೆ. ನಗರದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ.
ನೆರೆ ರಾಜ್ಯಗಳಲ್ಲಿ ಹೆಚ್ಚಿದ ವರುಣಾರ್ಭಟ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಮೊಂಟಾ ಸೈಕ್ಲೋನ್ ಅಂತಾ ನಾಮಕರಣ ಮಾಡಿದ್ದು, ಆಂಧ್ರದ ಮಚಲಿಪಟ್ಟಣಂ, ಕಳಿಂಗಪಟ್ಟಣ ನಡುವಿನ ಕಾಕಿನಾಡ ಸಮುದ್ರ ತೀರದಲ್ಲಿ 90 ರಿಂದ 110 ಕಿಲೋ ಮೀಟರ್ ವೇಗದಲ್ಲಿ ಕರಾವಳಿ ಅಪ್ಪಳಿಸಲಿದೆ. ಭಾರೀ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಆರ್ಭಟಿಸಲಿದೆ.
ಒಡಿಶಾ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಮಳೆ ಆಗಲಿದೆ, ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ NDRF, SDRF, ರಕ್ಷಣಾ ಸಿಬ್ಬಂದಿ ನಿಯೋಜಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಮುದ್ರಕ್ಕೆ ತೆರಳಿರೋ ಬೋಟ್‌ಗಳ ಸಮೇತ ತೀರಕ್ಕೆ ವಾಪಸ್ಸಾಗುವಂತೆ ಸೂಚಿಸಲಾಗುತ್ತಿದೆ.
ಲಕ್ಷದ್ವೀಪದ ಸಮೀಪ ವಾಯುಭಾರ ಕುಸಿತದಿಂದ ಆತಂಕ
ಲಕ್ಷದ್ವೀಪದ ಸಮೀಪ ವಾಯುಭಾರ ಕುಸಿತವಾಗಿದ್ದು, ಸಮುದ್ರದಲ್ಲಿ ಬಿರುಗಾಳಿ ಬೀಸುತ್ತಿದೆ. ಗಾಳಿಯ ಒತ್ತಡ ಹೆಚ್ಚಿರುವುದರಿಂದ ತಮಿಳುನಾಡು ಬೋಟ್‌ಗಳು ಸೇರಿದಂತೆ ನಾಡ ದೋಣಿಗಳು ವಾಪಸ್ ಆಗುತ್ತಿವೆ. ಉಡುಪಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ಗಳು 2-3 ದಿನಗಳ ಹಿಂದೆಯೇ ಸುರಕ್ಷಿತವಾಗಿ ಮಲ್ಪೆ ಬಂದರು. ಮಳೆಯಿಂದ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ, ಚಂಡಮಾರುತದ ಭೀತಿ ಹೆಚ್ಚಾಗಲಿದೆ ಮೀನುಗಾರರಿಗೆ ಆರ್ಥಿಕ ಹೊಡೆತ ಬೀಳುತ್ತದೆ ಎಂದು ಮೀನುಗಾರರು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.