Karnataka Weather Today: ರಾಜ್ಯದ ಕೆಲವೆಡೆ ಸಾಧಾರಣ ಮಳೆ; ಕಲ್ಯಾಣ ಕರ್ನಾಟದಲ್ಲಿ ಇನ್ನಷ್ಟು ಕುಸಿದ ತಾಪಮಾನ

Karnataka Weather Today: ರಾಜ್ಯದ ಕೆಲವೆಡೆ ಸಾಧಾರಣ ಮಳೆ; ಕಲ್ಯಾಣ ಕರ್ನಾಟದಲ್ಲಿ ಇನ್ನಷ್ಟು ಕುಸಿದ ತಾಪಮಾನ


ಕಲ್ಯಾಣ ಕರ್ನಾಟಕದಲ್ಲಿ ವಿಪರೀತ ಚಳಿ; ಬೀದರ್‌ನಲ್ಲಿ 9.5°C ತಾಪಮಾನ ದಾಖಲು

ಬೆಂಗಳೂರು, ನವೆಂಬರ್ 19: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (ಹವಾಮಾನ ಮುನ್ಸೂಚನೆ) ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಲ್ಯಾಣ ಕರ್ನಾಟಕದಲ್ಲಿ ವಿಪರೀತ ಚಳಿಯ ವಾತಾವರಣ ಇರಲಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ?

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ. ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಮೈಸೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೊಂದಿದೆ.

ರಾಜ್ಯದ ಯಾವೆಲ್ಲಾ ಪ್ರದೇಶಗಳಲ್ಲಿ ಒಣ ಹವೆ

ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆಯು ಒಳಗೊಂಡಿದೆ. ದಕ್ಷಿಣ ಒಳನಾಡಿನ ಬಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

ಕಲ್ಯಾಣ ಕರ್ನಾಟಕದಲ್ಲಿ ವಿಪರೀತ ಶೀತ

ಕಲ್ಯಾಣ ಕರ್ನಾಟಕದ ಬೀದರ್, ಬಾಗಲಕೋಟೆ, ಬೆಳಗಾವಿ ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು ವಿಜಯನಗರ, ವಿಜಯಪುರ ಮತ್ತು ಯಾದಗಿರಿಗಳಲ್ಲಿ 7 ರಿಂದ 9 ಡಿಗ್ರಿ ಸೆಲ್ಸಿಯಸ್ ಜಿಲ್ಲೆಯಲ್ಲಿ ತಾಪಮಾನ ಕುಸಿತವಾಗಿದೆ, ಸೋಮವಾರ ಬೀದರ್ ನಲ್ಲಿ 9.5 ° C ನಷ್ಟು ತಾಪಮಾನ ವರದಿಯಾಗಿದೆ. ನವೆಂಬರ್ 18 ರಿಂದ 21 ರ ವರೆಗೆ ರಾಜ್ಯದಲ್ಲಿ, ಉತ್ತರ ಒಳನಾಡು ಪ್ರದೇಶಗಳಲ್ಲಿ ವಿಪರೀತ ಚಳಿ ಇದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ಸೂಚನೆ ನೀಡಿದ್ದು, ಜನರಿಗೆ ಮನೆಯಿಂದ ಹೊರಬರಲು ಸುರಕ್ಷಿತವಾಗಿರುವಂತೆ ಪ್ರಾಧಿಕಾರ ಸೂಚಿಸಿದೆ. ನವೆಂಬರ್ 21 ರ ನಂತರ ತಾಪಮಾನ ಸುಧಾರಿಸಬಹುದೆಂದು ಹೇಳಲಾಗಿದೆ.

ರಾಜಧಾನಿಯಲ್ಲಿ ಲಘು ಮಳೆ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 18°C ​​ಇರಲಿದೆ. ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *