ಬೆಂಗಳೂರು, (ಏಪ್ರಿಲ್ 14): ಕರ್ನಾಟಕದಲ್ಲಿ (ಕರ್ನಾಟಕ) ಈ ಬಾರಿಯ ಬಿಸಿಲು ಜನರ ನೆತ್ತಿ ಸುಡುತ್ತಿದೆ. ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕವಾಗಿ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ, ಇದು ಈ ವರ್ಷದ ಹಂಗಾಮಿನಲ್ಲಿ ಗರಿಷ್ಠವಾಗಿದೆ. ಗದಗ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದು, ಇಲ್ಲಿನ ಜನರು ಹೈರಾಣಾಗಿದ್ದಾರೆ. ಇನ್ನು ಈ ಬಾರಿಯ ಬಿಸಿಲು ಸಿಲಿಕಾನ್ ಸಿಟಿ ಬೆಂಗಳೂರು (ಬೆಂಗಳೂರು ತಾಪಮಾನ) ಜನರನ್ನು ಸಹ ಬಿಟ್ಟಿಲ್ಲ. ಹೌದು…ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ ವರ್ಷದ ಬಿಸಿಲ ದಾಖಲೆಯನ್ನು ಮುರಿದಿದೆ.
ಬೆಂಗಳೂರಿನಲ್ಲಿ ಬರೆದ ದಾಖಲೆ ಬಿಸಿಲು
ಏಪ್ರಿಲ್ 13 ರಂದು ಬೆಂಗಳೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ, ಕಳೆದ ವರ್ಷ ಮಾರ್ಚ್ 35.4 ಡಿಗ್ರಿ ದಾಖಲೆಯನ್ನು ಮೀರಿಸಿತ್ತು. ಆದರೆ, ಇಂದು (ಏಪ್ರಿಲ್ 14) ಬೆಂಗಳೂರಿನಲ್ಲಿ 36.8 ಡಿಗ್ರಿ ತಾಪಮಾನ ದಾಖಲಾಗಿದೆ, ಇದು ದಾಖಲೆಯಾಗಿದೆ. ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಹೆಚ್ಚು ತಾಪಮಾನ ಕಂಡುಬಂದಿಲ್ಲ ಜನರಿಗೆ ಹೆಚ್ಚು ಬಿಸಿಯ ಅನುಭವವಾಗುತ್ತಿರುವಾಗ, ರಾತ್ರಿ ಬಿಸಿ ಗಾಳಿಯಿಂದ ಜನ ಕಂಗಾಲಾಗಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮಾಲಿನ್ಯದ ಭೀತಿ, ಕರಾವಳಿಯಲ್ಲಿ ಶುದ್ಧ ಗಾಳಿ! ಅಸ್ತಮಾ ರೋಗಿಗಳಿಗೆ ಎಚ್ಚರ
ಬೆಂಗಳೂರು ಜನರ ಆರೋಗ್ಯ ಕೆಡಿಸಿದ ಬಿಸಿಲು
ಈ ವರ್ಷ ರಾಜಧಾನಿಯಲ್ಲಿ ಬಿಸಲು ಎಫೆಕ್ಟ್ ಜನರ ಆರೋಗ್ಯದ ಮೇಲೆ ಬೀಳುತ್ತಿದೆ. ತಾಪಮಾನ ಹೆಚ್ಚಾಗುತ್ತಿರುವ ಕಾರಣ ನಿತ್ರಾಣ, ನಿರ್ಜಲೀಕರಣ , ಚರ್ಮದಲ್ಲಿ ಅಲರ್ಜಿ ಮತ್ತು ಅಜೀರ್ಣ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಗಳಿವೆ. ಇನ್ನು ಗರ್ಭಿಣಿಯರು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವಂತೆ ವೈದ್ಯರು ಮನವಿ ಮಾಡಿದ್ದಾರೆ. ಬಿಸಿಲಿನಲ್ಲಿ ಹೆಚ್ಚಾಗಿ ಓಡಾಟ ಮಾಡದಂತೆ ಹಾಗೂ ಹೊರಗಡೆ ಆಹಾರ ತಿಂಡಿ ಪದಾರ್ಥ ಸೇವನೆ ಮಾಡದಂತೆ ಸಲಹೆ.
ಕಲಬುರಗಿಯಲ್ಲಿ ಏ.17ರವರೆಗೂ ಭಾರಿ ಬಿಸಿ ಗಾಳಿ
ಉರಿ ಬಿಸಿಲಿನಿಂದಾಗಿ ತತ್ತರಿಸಿರುವ ಕಲಬುರಗಿ ಜಿಲ್ಲೆಗೆ ಏ.17ರವರೆಗೆ ಭಾರಿ ಬಿಸಿ ಗಾಳಿಯ ಅಲೆಗಳಿಗೆ ಎಲ್ಲೋ ಎಚ್ಚರಿಕೆ ನೀಡಲಾಗಿದೆ. ಹೀಟ್ವೇವ್ನಿಂದ ಆರೋಗ್ಯ ಸಮಸ್ಯೆ ಸಂಭವಿಸುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನ 12ರಿಂದ ಸಂಜೆ 5ರವರೆಗೂ ಹೊರಗೆ ಅಡ್ಡಾಡದಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸೂಚನೆ.
ಇನ್ನೂ ಉತ್ತರ ಒಳನಾಡಿನ ಬೀದರ್, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ, ಕಲಬುರಗಿ, ಜಿಲ್ಲೆಗಳಲ್ಲಿ 42 ರಿಂದ 44 ಡಿಗ್ರಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ 2 ಡಿಗ್ರಿ ಏರಿಕೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಏರಿಕೆಯಾಗುವ ಸಾಧ್ಯತೆ ಇದೆ.