ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಬೆಂಗಳೂರು, ನವೆಂಬರ್ 4: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (ಹವಾಮಾನ ಮುನ್ಸೂಚನೆ) ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ. ಇಂದು ಕರಾವಳಿ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ ಎಂದು ಹವಾಮಾನ ಇಲಾಖೆ.
ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ.
ಯಾವ ಪ್ರದೇಶಗಳಲ್ಲಿ ಒಣ ಹವೆಯ ಸಾಧ್ಯತೆ?
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳು ಸೇರಿದಂತೆ ಉತ್ತರ ಕನ್ನಡದಲ್ಲಿಯೂ ಒಣ ಹವೆ ಇರಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗ ಗಂಟೆಗೆ 11 ಕಿ.ಮೀ. ಇರಲಿದೆ. ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.