ಬೆಂಗಳೂರು, ಡಿಸೆಂಬರ್ 05: ನಾಳೆಯಿಂದ 4 ದಿನಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ, ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಸೇರಿ ಹಲವೆಡೆ ಕಳೆದ ದಿನಗಳಿಂದ ಸುರಿಯುತ್ತಿದ್ದ ಸಾಧಾರಣ ಮಳೆಗೆ ಬ್ರೇಕ್ ಬೀಳಲಿದೆ. ಕೆಲ ಜಿಲ್ಲೆಗಳಲ್ಲಿ ನಾಳೆ ಮಾತ್ರ ಮೋಡಕವಿದ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ.
ಎಲ್ಲೆಲ್ಲಿ ಒಣ ಹವೆ?
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳು #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಎಚ್ಚರಿಕೆವಹಿಸಿ
ಮುಂದಿನ 5 ದಿನಗಳು #ಮಳೆ #ಮುನ್ಸೂಚನೆ ಗಾಗಿ ನಕ್ಷೆಗಳು #ಕರ್ನಾಟಕ ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ ರಾಜ್ಯ. ಮೂಲ: IMD ಬೆಂಗಳೂರು@ಕರ್ನಾಟಕ ವಾರ್ತೆ #ಕರ್ನಾಟಕ ಮಳೆ pic.twitter.com/hME5NQO2je— ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (@ಕರ್ನಾಟಕ ಎಸ್ಎನ್ಡಿಎಂಸಿ) ಡಿಸೆಂಬರ್ 5, 2025
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡು ಭಾಗದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯವಾಗಿ ಇದೇ ರೀತಿಯ ವಾತಾವರಣ ಇರುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ.
ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನಲ್ಲಿ ನಾಳೆ ಮೋಡದ ವಾತಾವರಣ
ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ವೇಳೆ ಮೋಡ ಕವಿದ ವಾತಾವರಣ ಮನೆ ಮಾಡಿತ್ತು. ತಂಪಾದ ಗಾಳಿಯ ಜೊತೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಕೂಡ ಆದ ಪರಿಣಾಮ ಸಿಲಿಕಾನ್ ಸಿಟಿ ಫುಲ್ ಕೂಲ್ ಆಗುತ್ತಿದೆ. ನಾಳೆ ಮುಂಜಾನೆ ಕೂಡ ಮಂಜು ನಗರದ ಹಲವೆಡೆ ಕಾಣಸಿಗಲಿದೆ, ಬಳಿಕ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ನಗರದ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 8-14 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 5:41 pm, ಶುಕ್ರ, 5 ಡಿಸೆಂಬರ್ 25