Headlines

ಇಂದಿನ ಹವಾಮಾನ: ಉತ್ತರ ಒಳನಾಡಿನ ಹಲವೆಡೆ ಮಳೆ, ಹೇಗಿರಲಿದೆ ಬೆಂಗಳೂರು ವಾತಾವರಣ?

ಇಂದಿನ ಹವಾಮಾನ: ಉತ್ತರ ಒಳನಾಡಿನ ಹಲವೆಡೆ ಮಳೆ, ಹೇಗಿರಲಿದೆ ಬೆಂಗಳೂರು ವಾತಾವರಣ?


ಬೆಂಗಳೂರು, ನವೆಂಬರ್ 20: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮತ್ತು ಒಣ ಹವೆ ಮುಂದುವರಿದಿದ್ದು, ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಣ್ಣಪ್ರಮಾಣದ ಮಳೆಯಾಗುವ ಸಾಧ್ಯತೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ. ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಕಲಬುರಗಿ ಭಾಗದಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ.

ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗಿನ ವೇಳೆ ಕವಿದ ವಾತಾವರಣ ಇರಲಿದೆ, ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ, ಬೀದರ್ ನಲ್ಲಿ ಇತ್ತೀಚೆಗೆ ರಾಜ್ಯದಲ್ಲೇ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇದನ್ನೂ ಓದಿ: ಚಳಿ ಅಂತ ರೂಮ್‌ನಲ್ಲಿ ಬೆಂಕಿ ಹಾಕಿಕೊಂಡು ನಿದ್ರೆಗೆ ಜಾರಿದ ಯುವಕರು, ಉಸಿರುಗಟ್ಟಿ ಮೂವರು ಸಾವು

ಚಳಿಯ ಪ್ರಮಾಣ ಏರಿಕೆ

ಕೆಲವು ಪ್ರದೇಶಗಳಲ್ಲಿ ಹೆಚ್ಚು ಚಳಿ ಇರುವುದು ಗಮನಕ್ಕೆ ಬಂದಿದ್ದು, ಕರಾವಳಿ ಪ್ರದೇಶಗಳು ಮತ್ತು ಉತ್ತರ ಭಾಗದ ಕೆಲವು ಪ್ರದೇಶಗಳಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆಯಾಗಿದೆ. ಆದರೆ ದಕ್ಷಿಣ ಒಳನಾಡಿನ ಹೆಚ್ಚಿನ ಪ್ರದೇಶಗಳಲ್ಲಿ ಯಾವುದೇ ಮಹತ್ತರ ಬದಲಾವಣೆ ಕಂಡುಬಂದಿಲ್ಲ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣೆ ಕೇಂದ್ರ (KSNDMC) ನೀಡಿದ ಮಾಹಿತಿಯ ಪ್ರಕಾರ, ನವೆಂಬರ್ 1 ರಿಂದ ನವೆಂಬರ್ 17 ರವರೆಗೆ ರಾಜ್ಯದ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಒಟ್ಟು 26 ಜಿಲ್ಲೆಗಳ ಕೊರತೆ ದಾಖಲಾಗಿದೆ, ಈ ಮೂರು ಜಿಲ್ಲೆಗಳ ಕೊರತೆ ದಾಖಲಾಗಿದೆ. ಕೇವಲ ಎರಡು ಜಿಲ್ಲೆಗಳಲ್ಲಿ ನಿರೀಕ್ಷೆ ಮೀರಿ ಮಳೆಯಾಗಿವೆ. ಕಲಬುರಗಿಯಲ್ಲಿ ಅತಿರಿಕ್ತವಾಗಿ ಮಳೆ ಸುರಿದರೆ, ಯಾದಗಿರಿಯಲ್ಲಿಯೂ ಭಾರಿ ಮಳೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *