ಬೆಂಗಳೂರು, ನವೆಂಬರ್ 02: ರಾಜ್ಯದಲ್ಲಿ ಚಳಿಯ ನಡುವೆ ಮುಂದಿನ 5 ದಿನಗಳ ಕಾಲ ಮಳೆಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಕೆಲವೆಡೆ ನಾಳೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಅಥವಾ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಹವಾಮಾನ ಇಲಾಖೆ.
ಯಾವ್ಯಾವ ಪ್ರದೇಶಗಳಲ್ಲಿ ಮಳೆ?
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳು #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಎಚ್ಚರಿಕೆವಹಿಸಿ
ಮುಂದಿನ 5 ದಿನಗಳು #ಮಳೆ #ಮುನ್ಸೂಚನೆ ಗಾಗಿ ನಕ್ಷೆಗಳು #ಕರ್ನಾಟಕ ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ ರಾಜ್ಯ. ಮೂಲ: IMD ಬೆಂಗಳೂರು@ಕರ್ನಾಟಕ ವಾರ್ತೆ #ಕರ್ನಾಟಕ ಮಳೆ pic.twitter.com/PhAPacAQrZ— ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (@ಕರ್ನಾಟಕ ಎಸ್ಎನ್ಡಿಎಂಸಿ) ಡಿಸೆಂಬರ್ 2, 2025
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣ ಹವೆಯ ವಾತಾವರಣವನ್ನು ಅಂದಾಜಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇದೆ.
ಇದನ್ನೂ ಓದಿ: ರಾಜ್ಯದ ಕೆಲವೆಡೆ ಸಾಧಾರಣ ಮಳೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ
ಬೆಂಗಳೂರಿನಲ್ಲಿಯೂ ಸಾಧಾರಣ ಮಳೆ ಅಥವಾ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ನಗರದ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 6-13 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.