Headlines

ನಾಳೆಯ ಹವಾಮಾನ: ಚಳಿಯ ನಡುವೆ ವರುಣನ ಅಬ್ಬರ; ಯಾವ್ಯಾವ ಜಿಲ್ಲೆಗಳಲ್ಲಿ ನಾಳೆ ಮಳೆ?

ನಾಳೆಯ ಹವಾಮಾನ: ಚಳಿಯ ನಡುವೆ ವರುಣನ ಅಬ್ಬರ; ಯಾವ್ಯಾವ ಜಿಲ್ಲೆಗಳಲ್ಲಿ ನಾಳೆ ಮಳೆ?


ಬೆಂಗಳೂರು, ನವೆಂಬರ್ 28: ರಾಜ್ಯದಲ್ಲಿ ಆರಂಭಗೊಂಡಿರುವ ಚಳಿಯ ನಡುವೆ ರಾಜ್ಯದ ಕೆಲವೆಡೆ ನಾಳೆ (ನ.29) ಮತ್ತು ನಾಡಿದ್ದು (ನ.30) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ. ಮಧ್ಯ ಕರ್ನಾಟಕ, ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣವಿದೆ. ಬೆಂಗಳೂರಿನಲ್ಲಿಯೂ ಮೋಡಕವಿದ ವಾತಾವರಣದ ಸಾಧ್ಯತೆ ಇದೆ.

ರಾಜ್ಯದ ಎಲ್ಲೆಲ್ಲಿ ಮಳೆ?

ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಯ ಕೆಲವೆಡೆ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಿ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣವಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವೆಡೆ ಸಣ್ಣ ಚಳಿಯ ಅನುಭವ ಜನರಿಗೆ ಆಗಲಿದೆ.

ಇದನ್ನೂ ಓದಿ: ಚಳಿಯನ್ನೂ ಲೆಕ್ಕಿಸದೆ ಮೈದಾನದಲ್ಲೇ ಮಲಗಿದ ಆರ್ಮಿ ಸೇರಲು ಬಂದ ಯುವಕರು!

ಹೇಗಿರಲಿದೆ ಬೆಂಗಳೂರು ವಾತಾವರಣ?

ಮೋಡ ಕವಿದ ವಾತಾವರಣ ಇರಲಿದೆ, ಗರಿಷ್ಠ ಉಷ್ಟಾಂಶ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಧ 17 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಗಾಳಿಯ ವೇಗ ಗಂಟೆಗೆ 06-15ಕಿಲೋ ಮೀಟರ್ಗಳಷ್ಟು ಇರಲಿದೆ ಎಂದು ಹವಾಮಾನ ಇಲಾಖೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 5:58 pm, ಶುಕ್ರ, 28 ನವೆಂಬರ್ 25





Source link

Leave a Reply

Your email address will not be published. Required fields are marked *