
ಬೆಂಗಳೂರು, ಮಾರ್ಚ್ 15: ರಾಜ್ಯದ ಬಹುತೇಕ ಜಿಲ್ಲೆಗಳ ಜನರು ವಿಪರೀತ ಸೆಕೆಇದರಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು ಅಕಾಲಿಕವಾಗಿ ಸುರಿದ ಮಳೆ ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿ ಉತ್ತಮ ಮಳೆ, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸುತ್ತಿರುವ ಪ್ರಸಂಗವೂ ನಡೆದಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆ, ಸದಾಶಿವ ನಗರ, ನೆಹರು ನಗರ, ಶಾಹು ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಕೊಡಗಿನ ಹಲವೆಡೆಯೂ ಧಾರಾಕಾರ ಮಳೆ, ಸುಡು ಬಿಸಿಲಿನ ಸಂದರ್ಭ ಸುರಿದ ಮಳೆಕಾಫಿ ಬೆಳೆಗಾರರಲ್ಲಿ ಹರ್ಷ ತಂದಿದೆ.
ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಮಳೆ
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಗಾಳಿಯೊಂದಿಗೆ ಉತ್ತಮ ಮಳೆ, ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಚಿಕ್ಕಮಗಳೂರು ತಾಲ್ಲೂಕಿನ ಮುತ್ತೋಡಿ ಮತ್ತು ಕಡಬಗೆರೆ ಭಾಗದಲ್ಲಿ ಭಾರೀ ಮಳೆಯಾಗಿದೆ, ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲ್ಲೂಕಿನ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಕಣತಿ ಗ್ರಾಮದ ಬಳಿ ಮಳೆಗೆ ಮರ ಧರೆಗುರುಳಿದ ಹಿನ್ನೆಲೆ ಚಿಕ್ಕಮಗಳ ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ; ಕೊಡಗು, ಹಾಸನದಲ್ಲಿ ಲಘು ಮಳೆಯ ಸಾಧ್ಯತೆ!
ಹೇಗಿರಲಿದೆ ನಾಳೆ ರಾಜ್ಯದ ಹವಾಮಾನ?
ರಾಜ್ಯದ 4-5 ಜಿಲ್ಲೆಗಳ ನಾಳೆಯೂ ಗಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂದಾಜಿಸಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿ ಜಿಲ್ಲೆಗಳಿಗೆ ಹೆಚ್ಚಿನ ಉಷ್ಣತೆ ಇದೆ. ಬೆಂಗಳೂರಿನ ತಾಪಮಾನ ಗರಿಷ್ಠ 33-34 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಗಾಳಿಯ ವೇಗ ಗಂಟೆಗೆ 8-15 ಕಿಲೋ ಮೀಟರ್ ಇರಲಿದೆ, ಮಳೆಯ ಸಾಧ್ಯತೆ ತೀರಾ ಕಡಿಮೆ ಎಂದು ಹವಾಮಾನ ಇಲಾಖೆ ಇದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.