Headlines

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ, ಸಂಚಲನ ಮೂಡಿಸಿದ ಮತ್ತೊಂದು ಪತ್ರ

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ, ಸಂಚಲನ ಮೂಡಿಸಿದ ಮತ್ತೊಂದು ಪತ್ರ


ಬೆಂಗಳೂರು, (ನವೆಂಬರ್ 04): ಧರ್ಮಸ್ಥಳದಲ್ಲಿ (ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ) ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯ ಜೈಲು ಪಾಲಾಗಿದೆ, ಈ ಪ್ರಕರಣ ಕ್ಲೈಮ್ಯಾಕ್ಸ್ ತಲುಪಿದೆ ಎನ್ನುವಾಗಲೇ ಮಹಿಳಾ ಆಯೋಗಕ್ಕೆ ಪ್ರವೇಶ ನೀಡಲಾಗಿದೆ. ಹೌದು..ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಕೊಲೆ ಪ್ರಕರಣಗಳ ಜೊತೆಗೆ ಅಸಹಜ ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಎಸ್‌ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

ಆಯೋಗದ ಪತ್ರದಲ್ಲೇನಿದೆ?

ಧರ್ಮಸ್ಥಳದಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಈ ಹಿಂದೆ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿತ್ತು. ಅದಾದ ಬಳಿಕ ಎಸ್ ಐಟಿ ರಚನೆಯಾಗಿದೆ. ಎಸ್‌ಐಟಿ ರಚನೆಯಾಗಬೇಕೆಂಬ ಆಶಯವೂ ಮತ್ತು ಸರ್ಕಾರದ ಆದೇಶವೂ ಕೇವಲ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:39/2025, ಕಲಂ 211 (ಎ), ಬಿಎನ್‌ಎಸ್ ಪ್ರಕರಣದ ತನಿಖೆಗೆ ಸೀಮಿತವಾಗಿರದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಯನ್ನು ಎಸ್‌ಐಟಿ ಮಾಡಬೇಕೆಂದು ಸೂಚಿಸುತ್ತದೆ. ಹೀಗಿದ್ದರೂ, ಈವರೆಗೆ ಎಸ್‌ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಿಲ್ಲ ಎಂದು ಪತ್ರದಲ್ಲಿ ಆಯೋಗದ ಅಧ್ಯಕ್ಷ ಡಾ.ನಾಗಲಕ್ಷ್ಮೀ ಚೌಧರಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸುಜಾತಾ ಭಟ್ ತಪ್ಪೊಪ್ಪಿಗೆ: ಅನನ್ಯ ಭಟ್ ನಾಪತ್ತೆ ಪ್ರಕರಣದ ತನಿಖೆ ಅಂತ್ಯಗೊಳಿಸಿದ ಎಸ್‌ಐಟಿ

ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್‌ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಹಗಳ ಉತ್ಪಾದನೆಗೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಪನನದ ಸಂದರ್ಭದಲ್ಲಿ ಅಥವಾ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಜೊತೆಗೆ, ಎಸ್‌ಐಟಿ ರಚನೆ, ಆಯೋಗದ ಕೋರಿಕೆ ಮತ್ತು ತನಿಖೆಯ ನಂತರದ ಸರ್ಕಾರದ ಆದೇಶದಂತೆ ಎಸ್‌ಐಟಿಯು ಪ್ರಕರಣದ ತನಿಖೆ ನಡೆಸುತ್ತಿರುವಾಗ, ಎಸ್‌ಐಟಿಯು ಪ್ರಕರಣದ ತನಿಖೆ ಮತ್ತು ಯುವತಿಯರ ಅಸಮರ್ಪಕ ಪ್ರಕರಣಗಳು ಮತ್ತು ಕೊಲೆ ಪ್ರಕರಣಗಳ ಅಸಮರ್ಪಕ ಪ್ರಕರಣಗಳು ಈ ಬಗ್ಗೆ ಮಾಹಿತಿ ಆಯೋಗಕ್ಕೆ ನೀಡಿ ಎಂದು ಮನವಿ ಮಾಡಲಾಗಿದೆ.

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ‘ಕೊಂದವರು’ ಯಾರು? ಎಂಬ ಸತ್ಯವನ್ನು ಸರ್ಕಾರ ಸಾಬೀತುಪಡಿಸಿ ತಪ್ಪಿತಸ್ಥರಿಗೆ ವಿಧಿಸಬೇಕೆಂದು ಉಚಿತ ಮಹಿಳಾ ಸಂಘಟನೆಗಳು, ಹೋರಾಟಗಾರರ ಒಟ್ಟುಗೂಡಿ ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ದಿನದಂದು ಬೆಂಗಳೂರು ನಗರದ ಪಾರ್ಕ್‌ನಲ್ಲಿ ಮಹಿಳೆಯರ ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಇತ್ತೀಚೆಗೆ ಮಹಿಳಾ ನಾಯಕಿಯರು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಈ ಪ್ರಕರಣ ಸಂಬಂಧ ಚರ್ಚಿಸಿದ್ದರು.



Source link

Leave a Reply

Your email address will not be published. Required fields are marked *