ಬೆಂಗಳೂರು, ಜನವರಿ 19: ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ 10 ದಿನ ರಜೆ ಹಾಕಿ ಡಿಜಿಪಿ ಡಾ. ರಾಮಚಂದ್ರ ರಾವ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕಾನೂನಾತ್ಮಕ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚಿಸಲಿದ್ದಾರೆ. ಮತ್ತೊಂದೆಡೆ ಡಿಜಿಪಿಗೆ ಶಾಕ್ ಕೊಡುವ ತಯಾರಿಯಲ್ಲಿ ರಾಜ್ಯ ಸರ್ಕಾರ ಇತ್ತು, ಯಾವುದೇ ಕ್ಷಣ ಅಧಿಕಾರಿ ಅಮಾನತು ಆದೇಶ ಹೊರಬೀಳುವ ಸಾಧ್ಯತೆ ಇದೆ.
ವಿಡಿಯೋ ವೈರಲ್ ಆಗಿ ಕೇಳಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ವಿಚಾರಣೆ ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದರು. ಅದಾದ ಕೆಲವೇ ಹೊತ್ತಿನಲ್ಲಿ ಡಿಜಿಪಿ ರಜೆ ಹಾಕಿ ತೆರಳಿದ್ದಾರೆ. ಇನ್ನು ಘಟನೆ ಬಗ್ಗೆ ಮಾಜಿ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ , ಪ್ರಕರಣದಿಂದ ಪೊಲೀಸ್ ಇಲಾಖೆಗೆ ಮುಜುಗರವಾಗಿದೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲು ಕಾರಣ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್; ಪೊಲೀಸ್ ಇಲಾಖೆ ಮಾನ ಹರಾಜು ಹಾಕಿದ ಹಿರಿಯ ಐಪಿಎಸ್ ಅಧಿಕಾರಿ
ರಾಮಚಂದ್ರ ರಾವ್ ಫಸ್ಟ್ ರಿಯಾಕ್ಷನ್
ವಿಡಿಯೋ ವಿಚಾರ ಸಂಬಂಧ ಡಿಜಿಪಿ ಡಾ.ರಾಮಚಂದ್ರ ರಾವ್ ಪ್ರತಿಕ್ರಿಯೆ ನೀಡಿದ್ದು, ಇದು ಹಳೆಯ ವಿಡಿಯೋ ವೈರಲ್. ಈ ಕಾಲದಲ್ಲಿ ಏನು ಬೇಕಾದರೂ ಮಾಡುವ ಸಾಧ್ಯತೆ ಇದೆ. ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿದ್ದೆ. ಇದರ ಬಗ್ಗೆ ನಾನು ವಕೀಲರ ಜೊತೆಗೆ ಮಾತನಾಡುತ್ತೇನೆ. ಈ ಬಗ್ಗೆ ತನಿಖೆ ಆಗಬೇಕು ಎಂದು. ಘಟನೆ ಕುರಿತು ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇನೆ ಎಂದು ಪರಮೇಶ್ವರ್ ನಿವಾಸದ ಬಳಿ ಡಿಜಿಪಿ ಡಾ.ರಾಮಚಂದ್ರ ರಾವ್ ತಿಳಿಸಿದರು.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 7:17 pm, ಸೋಮ, 19 ಜನವರಿ 26