ಒಂದೇ ಮನೆಯಲ್ಲಿ ಐವರ ಶವ ಪತ್ತೆ: ಆರ್ಥಿಕ ಸಂಕಷ್ಟಕ್ಕೆ ನಾಮಾವಶೇಷವಾಯ್ತಾ ಕುಟುಂಬ?

ಒಂದೇ ಮನೆಯಲ್ಲಿ ಐವರ ಶವ ಪತ್ತೆ: ಆರ್ಥಿಕ ಸಂಕಷ್ಟಕ್ಕೆ ನಾಮಾವಶೇಷವಾಯ್ತಾ ಕುಟುಂಬ?


ಕಾಸಗಂಜ್, ಫೆಬ್ರವರಿ 22: ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆ ಅಮಾಪುರದ ಕೋಟ್ವಾಲಿ ವ್ಯಾಪ್ತಿಯ ಏಟಾ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಮನೆಯಲ್ಲಿ ಒಂದೇ ಕುಟುಂಬದ ಐವರ ಶವಗಳು ಸೇರಿವೆ. ಮೃತರನ್ನು ಸತ್ಯವೀರ್ ಅಲಿಯಾಸ್ ಶ್ಯಾಮವೀರ್ ‘ಫೌಜಿ’ (50), ಅವರ ಪತ್ನಿ ರಾಮಶ್ರೀ (48), ಪುತ್ರಿಯರಾದ ಪ್ರಾಚಿ (12) ಮತ್ತು ಅಮರಾವತಿ (10), ಹಾಗೂ ಪುತ್ರ ಗಿರೀಶ್ (9) ಎಂದು ಗುರುತಿಸಲಾಗಿದೆ. ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಐವರ ಅನುಮಾನಸ್ಪದ ಸಾವಿನ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ ಸತ್ಯವೀರ್ ವೃತ್ತಿಯಲ್ಲಿ ವೆಲ್ಡರ್ ಆಗಿದ್ದು, ಕಳೆದ 2-3 ದಿನಗಳಿಂದ ಕುಟುಂಬದವರು ಮನೆಯಿಂದ ಹೊರಬಂದಿರಲಿಲ್ಲ. ಈ ಬಗ್ಗೆ ಮಾಹಿತಿ ತಿಳಿದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಮನೆ ಬಾಗಿಲು ಒಳಗಿನಿಂದ ಬೀಗ ಹಾಕಲ್ಪಟ್ಟಿರುವುದು ಗೊತ್ತಾಗಿದೆ. ಹೀಗಾಗಿ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಸತ್ಯವೀರ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಇದ್ದಾರೆ, ಅವರ ಪತ್ನಿ ಮತ್ತು ಮೂವರು ಮಕ್ಕಳು ಹಾಸಿಗೆಯ ಮೇಲೆ ಮೃತ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪೊಲೀಸ್ ವ್ಯಾನ್ ಗೆ ಟ್ರಕ್ ಡಿಕ್ಕಿ; ಐವರು ಸ್ಥಳದಲ್ಲೇ ಸಾವು, ಮೂವರು ಗಂಭೀರ

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಎಸ್‌ಪಿ ಅಂಕಿತಾ ಶರ್ಮಾ, ಸತ್ಯವೀರ್ ಅಲಿಯಾಸ್ ಶ್ಯಾಮವೀರ್ ಮತ್ತು ಅವರ ಕುಟುಂಬವು 2-3 ದಿನಗಳಿಂದ ಹೊರಗೆ ಕಾಣಿಸದಿರುವ ಬಗ್ಗೆ ಮಾಹಿತಿ ಬಂದಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕುಟುಂಬ ಇರೋದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಫಾರೆನ್ಸಿಕ್ ತಂಡ ಮತ್ತು ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಾಥಮಿಕ ತನಿಖೆ ಆಧಾರದಲ್ಲಿ ಹೇಳುವುದಾದರೆ, ಕುಟುಂಬದ ಉಳಿದ ಸದಸ್ಯರನ್ನು ಹತ್ಯೆ ಮಾಡಿ ಬಳಿಕ ಸತ್ಯವೀರ್ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಹೀಗಿದ್ದರೂ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಎಂದು.

ಸ್ಥಳೀಯರ ಮಾಹಿತಿ ಪ್ರಕಾರ ಆರ್ಥಿಕ ಸಂಕಷ್ಟವೇ ಈ ಘಟನೆಗೆ ಕಾರಣವಾಗಿರಬಹುದು. ವೈದ್ಯಕೀಯ ಪಂಚನಾಮ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಿ, ಶವಗಳನ್ನು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *