
ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ (ಧ್ರುವ ಸರ್ಜಾ) ನಟಿಸಿರುವ ‘ಕೇಡಿ’ ಸಿನಿಮಾದ ಹಾಡೊಂದು ಭಾರಿ ವಿವಾದ ಸೃಷ್ಟಿಸಿತ್ತು. ‘ಸೆರಗ ಸರ್ಸೆ’ ಹಾಡಿನ ಸಾಹಿತ್ಯ ಮತ್ತು ಚಿತ್ರೀಕರಣಕ್ಕೆ ತೀವ್ರ ವಿವಾದ ಉಂಟಾಗಿದ್ದು, ಈ ವಿಷಯ ಲೋಕಸಭೆಯಲ್ಲಿ ಚರ್ಚೆಯಾಗುತ್ತಿದೆ. ಹಾಡು ಅಶ್ಲೀಲವಾಗಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ನಿರ್ದೇಶಕ ಮತ್ತು ಹಾಡಿನ ಮೂಲ ಸಾಹಿತ್ಯ ಬರೆದಿರುವ ಪ್ರೇಮ್, ಹಾಡಿನಲ್ಲಿ ನಟಿಸಿರುವ ನೋರಾ ಫತೇಹಿ, ಸಂಜಯ್ ದತ್ ಹಾಗೂ ಹಾಡಿನ ಹಿಂದಿ ಸಾಹಿತ್ಯ ಬರೆದಿರುವ ರಖೀಬ್ ಆಲಂ ನೋಟಿಸ್ ಜಾರಿ ಮಾಡಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಆಯೋಗ ಇದೀಗ ಮತ್ತೊಮ್ಮೆ ನೋಟಿಸ್ ನೀಡಿದೆ.
ಈ ಹಿಂದೆ ನೀಡಿದ್ದ ನೋಟೀಸಿನ ಅರ್ಜಿ ನೋರಾ ಫತೇಹಿ ಏಪ್ರಿಲ್ 6 ರಂದು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನೋರಾ ಪರವಾಗಿ ಅವರ ವಕೀಲರು ಹಾಜರಾಗಿದ್ದರು, ಇದನ್ನು ಒಪ್ಪದ ಮಹಿಳಾ ಆಯೋಗ ಖುದ್ದಾಗಿ ನಟಿಯೇ ಹಾಜರಾಗಿದ್ದಾರೆ. ಇದೀಗ ಮತ್ತೊಮ್ಮೆ ನೋರಾ ಫತೇಹಿಗೆ ನೋಟಿಸ್ ಹೊರಡಿಸಿದ್ದು, ಏಪ್ರಿಲ್ 27 ರಂದು ವಿಚಾರಣೆಯನ್ನು ನಿಗದಿಪಡಿಸಲಾಗಿದೆ. ಇದೇ ಪ್ರಕರಣಕ್ಕೆ ನಟ ಸಂಜಯ್ ದತ್ ಅವರಿಗೆ ಏಪ್ರಿಲ್ 8 ರಂದು ಆಯೋಗದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಕುರಿತು ಮತ್ತೊಂದು ಸಮನ್ಸ್ ಸಹ ಹೊರಡಿಸಲಾಗಿದೆ.
ಇದನ್ನೂ ಓದಿ:ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಇದೇ ಪ್ರಕರಣಕ್ಕೆ ನಿರ್ದೇಶಕ ಪ್ರೇಮ್, ನಿರ್ಮಾಪಕ ಕೆವಿಎನ್ ವೆಂಕಟೇಶ್ ಹಾಗೂ ಹಿಂದಿ ಆವೃತ್ತಿ ಬರೆದಿರುವ ರಖೀಬ್ ಆಲಂ ಅವರಿಗೂ ಸಹ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿತ್ತು. ಈ ಬಗ್ಗೆ ಲಿಖಿತ ಕ್ಷಮಾಪಣೆ ಸಲ್ಲಿಸಿರುವ ಇವರು ಮೂರು ತಿಂಗಳ ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ. ನಿರ್ದೇಶಕ ಪ್ರೇಮ್ ಈ ಬಗ್ಗೆ ವಿಡಿಯೋ ಮೂಲಕ ಕ್ಷಮೆ ಕೇಳಿದ್ದರು. ತಾವು ಹಾಡನ್ನು ಹಿಂಪಡೆದು ಸಾಹಿತ್ಯವನ್ನು ಮತ್ತೆ ರಚಿಸಿ ಹಾಡನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಜೊತೆಗೆ, ತಾವು ಆ ಎಣ್ಣೆ ಬಾಟಲಿಗೆ ಹೋಲಿಕೆಯಾಗಿ ಬರೆದಿರುವ ಹಾಡನ್ನು ಸ್ಪಷ್ಟವಾಗಿ ನೀಡಿದ್ದರು. ಹಾಡಿನಿಂದ ಯಾರಿಗಾದರೂ ನೋವಾದರೂ ಕ್ಷಮೆ ಇರಲಿ ಎಂದು ಸಹ ಹೇಳಿದ್ದರು.
‘ಕೇಡಿ’ ಸಿನಿಮಾವು ಬಹುತಾರಾಗಣದ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಸಿನಿಮಾದ ಧ್ರುವ ಸರ್ಜಾ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ರಿಷ್ಮಾ ನಾಣಯ್ಯ ನಟಿಸಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ, ಜೀಸು ಸೇನ್ ಗುಪ್ತ, ರವಿಚಂದ್ರನ್, ರಮೇಶ್, ಅಭಿಲಾಶ್ ಇನ್ನೂ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಏಪ್ರಿಲ್ 30ಕ್ಕೆ ಬಿಡುಗಡೆ ಆಗಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ