Headlines

CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ

CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ


ಬೆಂಗಳೂರು, ಏಪ್ರಿಲ್ 16: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆ ಹೆಸರಲ್ಲಿ ವಿದ್ಯಾರ್ಥಿಗಳ ಹಾದಿ ತಪ್ಪಿ ಒಂದಿಷ್ಟು ಮಂದಿ ಯತ್ನಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ವಿಚಾರ ಬಯಲಾಗಿದೆ. KEA ರೀತಿಯಲ್ಲೇ ನಕಲಿ ವೆಬ್ ಸೈಟ್ ಮಾಡಿರೋದು ಬೆಳಕಿಗೆ ಬಂದಿದ್ದು, ಸಿಇಟಿ ಎಕ್ಸಾಂ ಬರೆಯಲು ಮುಂದಾಗುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಸೈಬರ್ ವಂಚಕರು ಟಾರ್ಗೆಟ್ ಮಾಡಿದ್ದಾರೆ. ಹೀಗಾಗಿ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಸಿಇಟಿ ಬರೆಯಲು ತುದಿಗಾಲಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ಡೌನ್ ಮಾಡಿಕೊಳ್ಳುವ ವೇಳೆ ಎಚ್ಚರ ವಹಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.

ನಕಲಿ ವೆಬ್ ಸೈಟ್ ಯಾವುದು?

ಸಿಇಟಿ ಪರೀಕ್ಷೆಯ ದಿನಾಂಕ ನಿಗದಿಯಾಗಿದೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್‌ನಲ್ಲಿ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಕೂಡ ಲಭ್ಯವಿದೆ. ಏ.23 ಮತ್ತು 24ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲಾಗಿದೆ. ಆದರೆ ಕೆಲ ಕಿಡಿಗೇಡಿಗಳು https://applytocollege.co/kcet_admit_card_2026 ಎಂಬ ನಕಲಿ ವೆಬ್ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದೆಂದು ಹೇಳಿ ವಿದ್ಯಾರ್ಥಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಈ ಪ್ರಾಧಿಕಾರ ಈ ಬಗ್ಗೆ ಎಚ್ಚರಿಕೆ ನೀಡಿದೆ. ಅಧಿಕೃತ ವೆಬ್‌ಸೈಟ್ https://cetonline.karnataka.gov.in/UGCET_Admit_Card_2026/Forms/Login.aspx ಮೂಲಕವೇ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು.

ಇದನ್ನೂ ಓದಿ: ಇಂದನ ಬಿಗ್ ಶಾಕ್; ಸತತ 2ನೇ ವರ್ಷವೂ ಶುಲ್ಕ ಏರಿಕೆ

ಪರೀಕ್ಷೆಗೆ ಮುಂಚೆಯೇ ಸಿಇಟಿ ಪರೀಕ್ಷೆ ಬರೆಯುವವರ ಮೇಲೆ ಸೈಬರ್ ಕಿರಾತಕರು ಕಣ್ಣು ಹಾಕಿದ್ದಾರೆ, ನಕಲಿ ವೆಬ್ ಸೈಟ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಎಚ್ಚರವಹಿಸಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ದಿನಾಂಕ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *