ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ರೂಲ್ಸ್
ಬೆಂಗಳೂರು, ಡಿಸೆಂಬರ್ 02: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಮತ್ತು ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ. ಡಿಸೆಂಬರ್ 8, 2025 ರಿಂದ ಇವು ಜಾರಿಗೆ ಬರಲಿವೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತದ 3ನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದ್ದು, ಪ್ರತಿದಿನ ಸುಮಾರು 1,30,000 ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿದೆ. ಈ ಹಿನ್ನಲೆಯಲ್ಲಿ ಸುಮಾರು 1 ಲಕ್ಷ ವಾಹನಗಳು ಪ್ರತಿದಿನ ಏರ್ಪೋರ್ಟ್ ಮಾರ್ಗದಲ್ಲಿ ಸಂಚಾರ ನಡೆಸುತ್ತವೆ. ಇದರಿಂದ ವಿಶೇಷವಾಗಿ ಟರ್ಮಿನಲ್‌ಗಳ ಮುಂಭಾಗ ಇರುವ ಕರ್ಬ್ಸೈಡ್‌ನಲ್ಲಿ (ಡ್ರಾಪ್-ಆಫ್ ಮತ್ತು ಪಿಕ್-ಆಪ್ ಮಾರ್ಗಗಳು) ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಪ್ರಯಾಣಿಕರ ಅನುಕೂಲ, ಸಂಚಾರ ದಟ್ಟಣೆಯನ್ನು ಸರಾಗಗೊಳಿಸುವ ಮೂಲಕ ಒಂದಿಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಿತಿ ಮೀರಿದ ಸೈಡ್ ಪಿಕಪ್ ಚಾಲಕರ ಹಾವಳಿ; ಲಾಂಗ್ ಹಿಡಿದು ಅಟ್ಟಾಡಿಸಿದ ಭೂಪ ಅರೆಸ್ಟ್
ವಿಮಾನ ನಿಲ್ದಾಣಕ್ಕೆ ಬರುವ ಮಾರ್ಗದಲ್ಲಿ ಖಾಸಗಿ ಕಾರುಗಳು ಮತ್ತು ಕ್ಯಾಬ್‌ಗಳ ದೀರ್ಘಕಾಲದ ಕಾಯುವಿಕೆಯಿಂದ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚುತ್ತಿದೆ. ಇದರಿಂದ ಇತರ ವಾಹನಗಳ ಸಂಚಾರಕ್ಕೂ ಅಡ್ಡಿ ಉಂಟಾಗುತ್ತಿದೆ. ಹೀಗಾಗಿ ಅನಧಿಕೃತ ಪಾರ್ಕಿಂಗ್ ತಡೆಯಲು ಮತ್ತು ಕಾಯುವಿಕೆಯ ಸಮಯವನ್ನು ಕಡಿಮೆ ಮಾಡಲು ಪ್ರತ್ಯೇಕ ಪಥ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಇದು ಕರ್ಬ್‌ಸೈಡ್‌ನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವ ಜೊತೆಗೆ, ಟರ್ಮಿನಲ್‌ಗಳ ಮುಂದೆ ಪಿಕ್-ಅಪ್ ವಲಯದ ದುರುಪಯೋಗ ತಡೆಯಲೂ ನೆರೆ ವಸ್ತು.
ಹೊಸ ಪ್ರತ್ಯೇಕ ಪಥ ವ್ಯವಸ್ಥೆಯ ಪ್ರಕಾರ, ಟರ್ಮಿನಲ್ 1 ಮತ್ತು ಟರ್ಮಿನಲ್ 2 ರಲ್ಲಿ ನಿಗದಿಪಡಿಸಿದ ಪಿಕ್-ಆಪ್ ವಲಯಕ್ಕೆ ಆಗಮಿಸುವ ಎಲ್ಲಾ ಖಾಸಗಿ ಕಾರುಗಳಿಗೆ (ಬಿಳಿ ಬೋರ್ಡ್) ಪ್ರವೇಶ ಉಚಿತವಾಗಿದೆ. ವಾಹನ ನಿಲುಗಡೆಗೆ 8 ನಿಮಿಷಗಳ ಕಾಲ ಅವಕಾಶ ಸಿಗಲಿದೆ, ಸಮಯ ಮಿತಿ ಮೀರಿದರೆ ಯಾವುದೇ ವಾಹನಗಳಿಗೆ ಶುಲ್ಕ ವಿಧಿಸುವುದಿಲ್ಲ.
ಶುಲ್ಕ ಎಷ್ಟು?
- 8-13 ನಿಮಿಷಗಳ ಕಾಲ 150 ರೂ.
- 13-18 ನಿಮಿಷಗಳಿಗೆ 300 ರೂ.
- 18 ನಿಮಿಷ ಹೆಚ್ಚು ಕಾಲ ವಾಹನ ನಿಲ್ಲಿಸಿದರೆ ಹತ್ತಿರದ ಪೊಲೀಸ್ ಠಾಣೆಗೆ ಟೋಯಿಂಗ್
ಇನ್ನು ಹಳದಿ ಬೋರ್ಡ್ ಟ್ಯಾಕ್ಸಿ ಮತ್ತು ಎಲೆಕ್ಟ್ರಿಕ್ ಕ್ಯಾಬ್‌ಗಳು ಸೇರಿದಂತೆ ಎಲ್ಲಾ ವಾಣಿಜ್ಯ ವಾಹನಗಳನ್ನು ನಿಗದಿಪಡಿಸಿದ ಪಾರ್ಕಿಂಗ್ ವಲಯಗಳಲ್ಲಿ ಮಾತ್ರ ಪ್ರಯಾಣಿಕರಿಗಾಗಿ ಕಾಯಬೇಕು. ಸುಗಮ ಪಿಕ್-ಅಪ್ ಅನುಭವವನ್ನು ಒದಗಿಸಲು, ಪಾರ್ಕಿಂಗ್ ಮೊದಲ 10 ನಿಮಿಷಗಳು ಉಚಿತ ಸಮಯ. ಟರ್ಮಿನಲ್ 1ಕ್ಕೆ ಆಗಮಿಸುವ ವಾಣಿಜ್ಯ ವಾಹನಗಳು ಪಿ3 ಮತ್ತು ಪಿ4 ಪಾರ್ಕಿಂಗ್ ವಲಯಗಳಿಗೆ ತೆರಳಬೇಕು. ಟರ್ಮಿನಲ್ 2ಗೆ ಸೇವೆ ಸಲ್ಲಿಸುವ ವಾಹನಗಳು ಪಿ2 ಪಾರ್ಕಿಂಗ್ ವಲಯಕ್ಕೆ ತೆರಳಿದೆ.
ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಲೇ ಇರುತ್ತದೆ, ಪಿಕ್-ಅಪ್ ವಲಯಗಳಲ್ಲಿ ಶಿಸ್ತು ಕಾಪಾಡುವುದು ಅತ್ಯಗತ್ಯ. ಈ ಕ್ರಮದಿಂದ ಪ್ರಯಾಣಿಕರ ಸುರಕ್ಷತೆ, ಸುಗಮ ಆಗಮನ ಹಾಗೂ ನಿರ್ಗಮನಕ್ಕೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್) ಎಂ.ಡಿ. ಮತ್ತು ಸಿಐಒ ಹರಿ ಮರಾರ್ ಮೊದಲು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.