ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್


ಕೇರಳಿಗರ ‘ಚೇಟ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್

ಬೆಂಗಳೂರು, ಡಿಸೆಂಬರ್ 30: ಬೆಂಗಳೂರು (ಬೆಂಗಳೂರು) ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್‌ಗಳ ತೆರೆವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಬೆಳೆದವು. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್‌ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೆ ಪರಿಹಾರ ನೀಡದೇ ಇರುವ ವಿಚಾರ ಮುನ್ನೆಲೆಗೆ ಬಂದಿದೆ. ಇದೀಗ ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಕೇರಳಿಗರ ‘ಚೇಟ ಸಿದ್ದರಾಮಯ್ಯ’ ಎಂದು ಜರೆದಿದ್ದಾರೆ. ಜೊತೆಗೆ, ಕೇರಳಕ್ಕಾಗಿ ಸಿದ್ದರಾಮಯ್ಯ ಈವರೆಗೆ ಏನು ಮಾಡಿದ್ದಾರೆ ಎಂಬ ಪಟ್ಟಿ ನೀಡಿದೆ.

‘ಇದೊಂದು ಪ್ರಕರಣಕ್ಕೆ ಮಾತ್ರ ಸೀಮಿತ’ ಎಂದು ತಿಪ್ಪೇಸರುವ ಕೇರಳಿಗರ ಚೇತ ಸಿದ್ದರಾಮಯ್ಯ ಅವರ ವಸತಿ ರಹಿತ ಕನ್ನಡಿಗರಿಗೆ ಮಿಡಿಯುತ್ತಿರುವ ಮಾನವೀಯತೆ, ಕೇರಳದ ಅಕ್ರಮ ವಲಸಿಗರಿಗೆ ಮಿಡಿಯುತ್ತಿರುವ ಇಬ್ಬಗೆ ನೀತಿಗೆ ಧಿಕ್ಕಾರವಿರಲಿ. ಹೈಕಮಾಂಡ್ ಆರ್ಡರ್‌ನ ತಲೆಬಾಗಿ, ಕುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ರಮ ವಲಸಿಗರ ಪರವಾಗಿ, ತರಾತುರಿಯಲ್ಲಿ ಸಭೆಗಳನ್ನು ನಡೆಸಿ ಆದೇಶ ಹೊರಡಿಸಿ, ವಸತಿ ರಹಿತ ಕನ್ನಡಿಗರಿಗೆ ವಿಶ್ವಾಸದ್ರೋಹವಲ್ಲವೇ? ಕರ್ನಾಟಕದಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ವಸತಿರಹಿತ ಬಡ ಕನ್ನಡಿಗರಿಗೆ ಸೂರಿಲ್ಲ. ವಸತಿ ಇಲಾಖೆಯ ಮನೆ ಹಂಚಿಕೆಗಾಗಿ ಅರ್ಜಿ ಸಲ್ಲಿಸಿ ಜನರು ಹಗಲು ರಾತ್ರಿ ದುಡಿದ ಹಣವನ್ನು ಮುಂಗಡ ಕಟ್ಟಿ, ವರ್ಷಾನುಗಟ್ಟಲೇ ಇನ್ನೂ ಕಾಯುತ್ತಿದ್ದಾರೆ. ಇಂತಹ ನಿರ್ಗತಿಕರಿಗೆ ಮನೆ ನೀಡುವ ಮನಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ’ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ವೋಟ್ ಬ್ಯಾಂಕ್‌ಗಾಗಿ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ, ವಸತಿ ಸಚಿವ ಜಮೀರ್ ಅಹ್ಮದ್ ಕನ್ನಡಿಗರ ತೆರಿಗೆ ಹಣದಲ್ಲಿ ವಲಸಿಗರಿಗೆ 11.20 ಲಕ್ಷ ರೂ ವೆಚ್ಚದ ಮನೆಗಳನ್ನು ನೀಡಿ, ರಾಜಮಾರ್ಯದೆ ಕೊಡುತ್ತಿರುವುದು ರಾಜ್ಯದ ಜನರಿಗೆ ವಂಚನೆಯಾಗಿದೆ ಎಂದು ಜೆಡಿಎಸ್ ಟೀಕಿಸಿದೆ.

ಜೆಡಿಎಸ್ ಎಕ್ಸ್ ಸಂದೇಶ

ಹೈಕಮಾಂಡ್‌ನ ತೊಗಲುಗೊಂಬೆಯಾದ ಕಾಂಗ್ರೆಸ್‌ ಸರ್ಕಾರ ಎಂದು ಮತ್ತೊಂದು ಸಂದೇಶದ ಮೂಲಕ ಕಿಡಿಕಾರಿದೆ.

ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರನ್ನು ಹೈಕಮಾಂಡ್ ತನ್ನ ಕೈಗೊಂಬೆಯಾಗಿಸಿಕೊಂಡು ಆಟವಾಡಿಸುತ್ತಿದೆ. ಕೇರಳದ ಅಕ್ರಮ ವಲಸಿಗರಿಗೆ ಬೆಂಗಳೂರಿನಲ್ಲಿ 11.20 ಲಕ್ಷ ರೂ. ಮೌಲ್ಯದ ಮನೆ ಗ್ಯಾರಂಟಿ, ಕೇರಳದ ವಯನಾಡಿನ ಸಂತ್ರಸ್ತರಿಗೆ 10 ಕೋಟಿ ರೂ. ವೆಚ್ಚದಲ್ಲಿ 100 ಮನೆ, ಆನೆದಾಳಿಗೆ ಬಲಿಯಾದ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ, ಇದು ಕನ್ನಡಿಗರ ವಿರೋಧಿ ಕಾಂಗ್ರೆಸ್ ನಿಂದ ರಾಜ್ಯದ ಜನತೆಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯ ಎಂದು ಜೆಡಿಎಸ್ ಹೇಳಿದೆ.

ಇದನ್ನೂ ಓದಿ: ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ

ಭೂಸ್ವಾಧೀನ ವಿರೋಧಿಸಿದ ರೈತರ ಮೇಲೆ ಕೋಪ, ಆಕ್ರೋಶ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗ ಕೇರಳಿಗರ ಮೇಲೆ ಮೃದುಧೋರಣೆ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣಕ್ಕೆ ಧಿಕ್ಕಾರ ಎಂದು ಜೆಡಿಎಸ್ ರಾಜಕೀಯದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *