ಬೆಂಗಳೂರು, ಮೈಸೂರಲ್ಲಿ ಅಭಿಮಾನಿಗಳ ಜೊತೆ ‘ಮಾರ್ಕ್​’ ನೋಡ್ತಾರೆ ಸುದೀಪ್; ಇಲ್ಲಿದೆ ವಿವರ

ಬೆಂಗಳೂರು, ಮೈಸೂರಲ್ಲಿ ಅಭಿಮಾನಿಗಳ ಜೊತೆ ‘ಮಾರ್ಕ್​’ ನೋಡ್ತಾರೆ ಸುದೀಪ್; ಇಲ್ಲಿದೆ ವಿವರ


ನಟ ಕಿಚ್ಚ ಸುದೀಪ್ (ಕಿಚ್ಚ ಸುದೀಪ್) ಅವರು ಮೊದಲ ದಿನ ಅಭಿಮಾನಿಗಳ ಜೊತೆ ಸಿನಿಮಾ ನೋಡೋದನ್ನು ನಿಲ್ಲಿಸಿ ಬಹಳ ಸಮಯ ಕಳೆದಿದೆ. ನೂಕು ನುಗ್ಗಲು ಎಂಬ ಕಾರಣಕ್ಕೆ ಅವರು ಅವಾಯ್ಡ್ ಮಾಡುತ್ತಾ ಬರುತ್ತಿದ್ದಾರೆ. ಈಗ ‘ಮಾರ್ಕ್’ ಸಿನಿಮಾ ಹಿಟ್ ಆಗಿದ್ದು, ಅವರ ಅಭಿಮಾನಿಗಳ ಜೊತೆ ಚಿತ್ರ ನೋಡಲು ನಿರ್ಧರಿಸಿದ್ದಾರೆ. ಡಿಸೆಂಬರ್ 31 ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಸುದೀಪ್ ‘ಮಾರ್ಕ್’ ವೀಕ್ಷಣೆ ನಡೆಯಲಿದೆ.

ಕಳೆದ ವರ್ಷ ಡಿಸೆಂಬರ್ 25 ರಂದು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿದೆ. ಡಿಸೆಂಬರ್ 31 ರಂದು ಅವರ ಪತ್ನಿ ಪ್ರಿಯಾ, ನಿರ್ದೇಶಕ ವಿಜಯ್ ಕಾರ್ತಿಕೇಯ, ಗಾಯಕ ವಿಜಯ್ ಪ್ರಕಾಶ್ ಹಾಗೂ ಅಭಿಮಾನಿಗಳ ಜೊತೆ ನರ್ತಕಿ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ್ದರು. ಈ ಬಾರಿ ಡಿಸೆಂಬರ್ 31 ರಂದು ಫ್ಯಾನ್ಸ್ ಜೊತೆ ‘ಮಾರ್ಕ್’ ಸಿನಿಮಾ ನೋಡಲಿದ್ದಾರೆ.

ಡಿಸೆಂಬರ್ 31 ರಂದು ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಬೆಳಿಗ್ಗೆ 10.30 ರ ಶೋನ ಸುದೀಪ್ ವೀಕ್ಷಿಸಲಿದ್ದಾರೆ. ಈ ಶೋ ನಂತರ ಅಲ್ಲಿಂದ ನೇರವಾಗಿ ಮೈಸೂರಿಗೆ ತೆರಳಲಿದ್ದಾರೆ. ಮೈಸೂರಿನ ಸಂಗಮ ಚಿತ್ರಮಂದಿರದಲ್ಲಿ ಸಂಜೆ 4.30ಕ್ಕೆ ಅಭಿಮಾನಿಗಳ ಜೊತೆ ಸಿನಿಮಾ ನೋಡಲಿದ್ದಾರೆ.

ಈ ಮೊದಲು ಮಾಧ್ಯಮದವರ ಜೊತೆ ಮಾತನಾಡಿದ್ದ ಸುದೀಪ್, ‘ಫಸ್ಟ್ ಡೇ ಸಿನಿಮಾ ನೋಡ್ತೀರಾ’ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ‘ಸದ್ಯಕ್ಕೆ ಆ ಬಗ್ಗೆ ಆಲೋಚನೆ ಇಲ್ಲ. ಸಿನಿಮಾ ಚೆನ್ನಾಗಿ ಹೋದರೆ ಅಭಿಮಾನಿಗಳ ಜೊತೆ ಡಿಸೆಂಬರ್ 31ರಂದು ಸಿನಿಮಾ ನೋಡುತ್ತೇನೆ’ ಎಂದಿದ್ದರು. ಈಗ ಚಿತ್ರಕ್ಕೆ ಮೆಚ್ಚುಗೆ ಸಿಕ್ಕ ಅವರು ಫ್ಯಾನ್ಸ್ ಜೊತೆ ‘ಮಾರ್ಕ್’ ಸಿನಿಮಾ ನೋಡುತ್ತಿದ್ದಾರೆ.

ಇದನ್ನೂ ಓದಿ: ನಾಲ್ಕು ದಿನಕ್ಕೆ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಮಾರ್ಕ್’; ದಾಖಲೆ ನಿರ್ಮಾಣ

ಡಿಸೆಂಬರ್ 25ರಂದು ರಿಲೀಸ್ ಆದ ‘ಮಾರ್ಕ್’ ಸಿನಿಮಾ ನಾಲ್ಕು ದಿನಗಳಲ್ಲಿ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರ ಸೂಪರ್ ಹಿಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 1:20 pm, ಮಂಗಳವಾರ, 30 ಡಿಸೆಂಬರ್ 25





Source link

Leave a Reply

Your email address will not be published. Required fields are marked *