ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ರೋಗಿಗಳ ಪಾಲಿಗೆ ನರಕಯಾತನೆಯ ತಾಣ: ಬೆಡ್‌ ಇಲ್ಲವೆಂದು ಅಪಘಾತದ ಗಾಯಾಳನ್ನು ಹೊರಗೇ ನಿಲ್ಲಿಸಿದ ಸಿಬ್ಬಂದಿ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ರೋಗಿಗಳ ಪಾಲಿಗೆ ನರಕಯಾತನೆಯ ತಾಣ: ಬೆಡ್‌ ಇಲ್ಲವೆಂದು ಅಪಘಾತದ ಗಾಯಾಳನ್ನು ಹೊರಗೇ ನಿಲ್ಲಿಸಿದ ಸಿಬ್ಬಂದಿ


ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ರೋಗಿಗಳ ಪಾಲಿಗೆ ನರಕಯಾತನೆಯ ತಾಣ: ಬೆಡ್‌ ಇಲ್ಲವೆಂದು ಅಪಘಾತದ ಗಾಯಾಳನ್ನು ಹೊರಗೇ ನಿಲ್ಲಿಸಿದ ಸಿಬ್ಬಂದಿ

ಹುಬ್ಬಳ್ಳಿ, ಮಾ.14: ಉತ್ತರ ಕರ್ನಾಟಕದ ಅತಿದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ರೋಗಿಗಳ ಪಾಲಿಗೆ ನರಕಯಾತನೆಯ ತಾಣವಾಗಿ ಮಾರ್ಪಡುತ್ತಿದೆಯೇ ಎಂಬ ಅನುಮಾನ ಮೂಡಿದೆ. ಧಾರವಾಡದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ವ್ಯಕ್ತಿಗೆ ಬೆಡ್ ಎಂಬ ಕಾರಣ ನೀಡಿ ಚಿಕಿತ್ಸೆ ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ. ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಾಣಾಪಾಯದಲ್ಲಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆತರಲಾಯಿತು. ಗಾಯಾಳುವನ್ನು ಆಂಬ್ಯುಲೆನ್ಸ್‌ನಲ್ಲಿ ಕರೆತಂದರೂ, ಆಸ್ಪತ್ರೆಯ ಸಿಬ್ಬಂದಿ “ಬೆಡ್‌ಗಳು ಖಾಲಿ ಇಲ್ಲ” ಎಂದು ಹೇಳಿ ಆಂಬ್ಯುಲೆನ್ಸ್‌ನಿಂದ ಕೆಳಗೆ ಇಳಿಸಲು ನಿರಾಕರಿಸಿದ್ದಾರೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗಾಯಾಳು ಆಂಬ್ಯುಲೆನ್ಸ್ ನಲ್ಲೇ ಸಾವು-ಬದುಕಿನ ನಡುವೆ ಹೋರಾಡಿದರು. ಕೊನೆಗೆ ದಾರಿ ಕಾಣದೆ, ಗಾಯಾಳುವಿನ ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಮ್ಸ್ ಆಸ್ಪತ್ರೆಯ ಈ ಬೇಜವಾಬ್ದಾರಿತನವನ್ನು ಆಂಬ್ಯುಲೆನ್ಸ್ ಚಾಲಕ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಬೆಡ್ ಇಲ್ಲ ಎಂದು ನಿರ್ಲಕ್ಷ್ಯದಿಂದ ಉತ್ತರ ನೀಡುವ ಸಿಬ್ಬಂದಿಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *