Headlines

KL Rahul: ಕ್ಲಾಸ್ ಕನ್ನಡಿಗನ ಹೆಸರಿಗೆ ಮತ್ತೊಂದು ಮೈಲುಗಲ್ಲು

ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕನ್ನಡಿಗ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಾವಿರ ರನ್​ ಸರದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ ಪ್ರಥಮ ಇನಿಂಗ್ಸ್​ನಲ್ಲಿ 42 ರನ್ ಬಾರಿಸಿದರು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ರಾಹುಲ್ ಮೂರನೇ ದಿನದಾಟದ ಅಂತ್ಯದ ವೇಳೆಗೆ ಅಜೇಯ 47 ರನ್ ಬಾರಿಸಿದ್ದಾರೆ. ಈ 47 ರನ್ ಗಳೊಂದಿಗೆ ಕನ್ನಡಿಗ ಆಂಗ್ಲರ ವಿರುದ್ಧ ಟೆಸ್ಟ್ ನಲ್ಲಿ ಸಾವಿರ ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಈವರೆಗೆ 14 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೆಎಲ್ ರಾಹುಲ್ 26 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕನ್ನಡಿಗ ಕಲೆಹಾಕಿರುವುದು 1044 ರನ್​ಗಳು. ಇದರ ನಡುವೆ 3 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

ಈ ಮೂಲಕ ಭಾರತ - ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ 26ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 14ನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ‌ ಪಾತ್ರರಾಗಿದ್ದಾರೆ.

ಈ ಮೂಲಕ ಭಾರತ – ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ 26ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 14ನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ‌ ಪಾತ್ರರಾಗಿದ್ದಾರೆ.

ಇನ್ನು ಭಾರತ - ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಜೋ ರೂಟ್. ಟೀಮ್ ಇಂಡಿಯಾ ವಿರುದ್ಧ ಈವರೆಗೆ 56* ಇನಿಂಗ್ಸ್ ಆಡಿರುವ ರೂಟ್ ಒಟ್ಟು 2874 ರನ್ ಕಲೆಹಾಕಿದ್ದಾರೆ. ಈ ವೇಳೆ ರೂಟ್ ಬ್ಯಾಟ್ ನಿಂದ 10 ಶತಕಗಳು ಮತ್ತು 11 ಅರ್ಧಶತಕಗಳು ಮೂಡಿಬಂದಿವೆ.

ಇನ್ನು ಭಾರತ – ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಜೋ ರೂಟ್. ಟೀಮ್ ಇಂಡಿಯಾ ವಿರುದ್ಧ ಈವರೆಗೆ 56* ಇನಿಂಗ್ಸ್ ಆಡಿರುವ ರೂಟ್ ಒಟ್ಟು 2874 ರನ್ ಕಲೆಹಾಕಿದ್ದಾರೆ. ಈ ವೇಳೆ ರೂಟ್ ಬ್ಯಾಟ್ ನಿಂದ 10 ಶತಕಗಳು ಮತ್ತು 11 ಅರ್ಧಶತಕಗಳು ಮೂಡಿಬಂದಿವೆ.

ಇನ್ನು  ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 465 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 6 ರನ್​ಗಳ ಮುನ್ನಡೆ ಪಡೆದಿರುವ ಟೀಮ್ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ 90 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್​​ಮನ್ ಗಿಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ನಾಲ್ಕನೇ ದಿನದಾಟದಲ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ.

Published On – 8:32 am, Mon, 23 June 25

Source link

Leave a Reply

Your email address will not be published. Required fields are marked *