
IND vs ENG 1st Test: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿದ್ದಾರೆ. ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿದರು.

ಈ ತಾಳ್ಮೆಯುತ ಬ್ಯಾಟಿಂಗ್ನೊಂದಿಗೆ 202 ಎಸೆತಗಳಲ್ಲಿ ಶತಕ ಪೂರೈಸಿದ ರಾಹುಲ್ ವಿಶೇಷ ದಾಖಲೆ ಬರೆದರು. ಅದು ಕೂಡ ಲೆಜೆಂಡ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಅಂದರೆ ಇಂಗ್ಲೆಂಡ್ ನಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು 2 ಶತಕ ಬಾರಿಸಿದ ಏಷ್ಯನ್ ಬ್ಯಾಟರ್ ಎಂಬ ದಾಖಲೆಯೊಂದು ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಇದೀಗ ಕೆಎಲ್ಆರ್ ಮುರಿದಿದ್ದಾರೆ.

ಕೆಎಲ್ ರಾಹುಲ್ ಆಂಗ್ಲರ ನಾಡಿನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಈವರೆಗೆ 3 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಏಷ್ಯನ್ ಓಪನರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ 50+ ಸ್ಕೋರ್ ಗಳಿಸಿದ ಭಾರತೀಯ ಆರಂಭಿಕರ ಪಟ್ಟಿಯಲ್ಲಿ ಕೆಎಲ್ ರಾಹುಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (19) ಮೊದಲ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ (9) ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ 247 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 18 ಫೋರ್ಗಳೊಂದಿಗೆ 137 ರನ್ ಬಾರಿಸಿದರು. ಈ ಆಕರ್ಷಕದ ಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ 364 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 371 ರನ್ಗಳ ಗುರಿ ನೀಡಿದೆ.
Published On – 7:54 am, Tue, 24 June 25