ಬೆಂಗಳೂರು, (ಡಿಸೆಂಬರ್ 23): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (ಸಿದ್ದರಾಮಯ್ಯ) ಹಾಗೂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆಂದು ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಹೇಳಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯರನ್ನು ಭೇಟಿ ಮಾಡಿ ಮನವೊಲಿಸುವುದು ಕಸರತ್ತು. ಇದರ ನಡುವೆ ಇತ್ತ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ರಾಜಕೀಯ ವಿರೋಧಿ ಸಿದ್ದರಾಮಯ್ಯನವರ ಅತ್ಯಾಪ್ತ ಕೆಎನ್ ರಾಜಣ್ಣ ಅವರಿಗೆ ಡಿಕೆ ಶಿವಕುಮಾರ್ ಎರಡು ಬಾರಿ ಭೇಟಿ ಗಾಳ ಹಾಕಲು ಯತ್ನಿಸಿದ್ದಾರೆ. ಆದರೆ ಇದಕ್ಕೆ ರಾಜಣ್ಣ ಸೊಪ್ಪು ಹಾಕಿಲ್ಲ. ಡಿಕೆಶಿ ಭೇಟಿ ಬಳಿಕ ಇದೀಗ ರಾಜಣ್ಣ ಇಂದು (ಡಿಸೆಂಬರ್ 23) ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ, ಗೊಂದಲ ನಿವಾರಣೆ ಮಾಡುವ ಕೆಲಸ ಆಗಬೇಕು. ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು ಸರಿಯಾಗಿದೆ. ಹೈಕಮಾಂಡ್ ಗೊಂದಲ ಪರಿಹರಿಸಬೇಕಾಗಿದೆ. ರಾಹುಲ್ ಗಾಂಧಿ ಹೇಳಿದ್ರೆ ಸಿಎಂ ಸ್ಥಾನ ಬಿಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಹೇಳಿಕೆ ನೀಡಿದ್ದಾರೆ. ಗೊಂದಲದಿಂದ ಆಡಳಿತದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಒಪ್ಪಂದ ಆಗಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಒಪ್ಪಂದವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಒಪ್ಪಂದದ ವಿಚಾರವನ್ನು ತಳ್ಳಿ ಹಾಕಲಾಗಿದೆ. ಐಸಿಸಿ ಅಧ್ಯಕ್ಷರು ಬಂದಾಗ ಎಲ್ಲರೂ ಭೇಟಿಯಾಗುವುದು ಸಹಜ.
ಡಿಸಿಎಂ ಡಿ.ಕೆ.ಶಿವಕುಮಾರ್ ಆಗಿದ್ದು ಬೇರೆ, ಪತ್ರ ಬರೆದಿದ್ದು ಬೇರೆ.
ಒಂದು ವೇಳೆ ರಾಹುಲ್ ಗಾಂಧಿ ಹೇಳಿದ್ರೆ ಸಿದ್ದರಾಮಯ್ಯನವರ ಸ್ಥಾನವನ್ನು ಬಿಟ್ಟುಕೊಡುತ್ತಾರಾ ಸಿಎಂ ಸಿಎಂ? ಸಿಎಂ ಬಿಟ್ಟು ಕೊಡುವಂತೆ ರಾಹುಲ್ ಗಾಂಧಿ ಹೇಳಿದರೆ ಸಿದ್ದರಾಮಯ್ಯ ಬೆಂಬಲಿಗರು ಸುಮ್ನೆ ಇರುತ್ತಾರೆಯೇ? ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿದ್ದು, ಬೀಸೋ ದೊಣ್ಣೆಯಿಂದ ಪಾರಾಗಲು ಸಿದ್ದರಾಮಯ್ಯ ರಾಹುಲ್ ಹೆಸರಿಡುತ್ತಾ ಹೋಗುತ್ತಿದ್ದಾರೆ. ಹೀಗಾಗಿ ಡಿಕೆಶಿ ಸಹ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಕಡೆ ರಾಹುಲ್ ಗಾಂಧಿ ಮನವೊಲಿಸುವ ಯತ್ನ ಮಾಹಿತಿ ತಿಳಿದುಬಂದಿದ್ದು, ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ನಿಲ್ಲಲಿದೆ ಎಂದು ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ