ಮುಂಗಾರು ಆರಂಭದಲ್ಲಿ ಗದ್ದೆಯನ್ನು ಉತ್ತು-ತ್ತಿ ಕಟಾವಿನಕ್ಕೆ ತಂದ ಕೊಡಗಿನವರು, ಭೂ ದೇವಿಗೆ ಕೃತಜ್ಞತಾ ಪೂರ್ವಕವಾಗಿ ಹಬ್ಬವನ್ನು ಆಚರಿಸುತ್ತಾರೆ. ಹುತ್ತರಿ ಎಂದರೆ ಹೊಸ ಅಕ್ಕಿ ಎಂದರ್ಥ. ಕೊಡಗಿನಲ್ಲಿ ಇದು ಪುತ್ತರಿ ಹಬ್ಬ ಎಂದೆಂದಿಗೂ ಫೇಮಸ್. ಭತ್ತದ ಗದ್ದೆಯಿಂದ ಧಾನ್ಯಲಕ್ಷ್ಮಿಯನ್ನು ವಿಜೃಂಭಣೆಯಿಂದ ಮನೆಗೆ ತಂದು ತುಂಬಿಸಿಕೊಳ್ಳುವುದೇ ಹುತ್ತರಿ ಹಬ್ಬದ ವಿಶೇಷ. ಕೇರಳದ ಓಣಂ ಹಬ್ಬ ಕಳೆದು ಸರಿಯಾಗಿ ಮೂರು ತಿಂಗಳಲ್ಲಿ ಈ ಹಬ್ಬ ನಡೆಯುತ್ತಿದೆ.